ಧಾರವಾಡ: ಜಿಲ್ಲಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ 30 ರ ಸಂಜೆ.7 ರಿಂದ ಜೂ. 1 ರ ಬೆಳಗ್ಗೆ 7 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಲಾಗಿತ್ತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ ಭಾನುವಾರದಂದು ಪೂರ್ಣ ದಿನದ ಲಾಕ್ಡೌನ್ ಎಂದು ಆದೇಶಿಸಲಾಗಿರುವುದನ್ನು ಮಾರ್ಪಡಿಸಿ, ಮೇ 31 ರಂದು ಬೆಳಗ್ಗೆ 7 ರಿಂದ ರಾತ್ರಿ 7 ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ ಆದೇಶಿಸಿದೆ.
ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಯಥಾಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆದ ದೀಪಾ ಚೋಳನ್ಗೆ ಆದೇಶಿಸಿದ್ದಾರೆ.