ಬೆಂಗಳೂರು : ಬೆಂಗಳೂರಿನಲ್ಲಿ ಭಾನುವಾರದ ಲಾಕ್ಡೌನ್ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಸಾರ್ವಜನಿಕರು ಅಗತ್ಯ ಸೇವೆ ಹೊರತುಪಡಿಸಿ ಅನಾವಶ್ಯಕವಾಗಿ ಓಡಾಡದಂತೆ ತಿಳಿಸಿದ್ದಾರೆ. ಅನಾವಶ್ಯಕವಾಗಿ ಓಡಾಟ ನಡೆಸಿದ್ರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಮಾಸ್ಕ್ ಹಾಕದೆ ಓಡಾಡಿದ್ರೆ, ಅನಗತ್ಯ ಓಡಾಡಿದ್ರೆ ಮಾರ್ಷಲ್ಸ್ ಹಾಗೂ ಪೊಲೀಸರು ದಂಡ ವಿಧಿಸಲಿದ್ದಾರೆ. ಅಗತ್ಯ ಮೆಡಿಕಲ್ ಸೌಲಭ್ಯ, ತರಕಾರಿ, ದಿನಸಿ, ಮಾಂಸ ಖರೀದಿಗೆ ಅವಕಾಶ ಇರಲಿದೆ ಎಂದಿದ್ದಾರೆ.