ETV Bharat / state

ಬಳ್ಳಾರಿಯಲ್ಲಿ ಟ್ರಾಮಾ ಸೆಂಟರ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಹರ್ಷವರ್ಧನ್‌

author img

By

Published : Aug 31, 2020, 4:18 PM IST

ಬಳ್ಳಾರಿಯಲ್ಲಿ ನಿರ್ಮಿಸಲಾದ ಸೂಪರ್‌ ಸ್ಪೆಷಾಲಿಟಿ ಟ್ರಾಮಾ ಸೆಂಟರ್​ನನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್‌ ವರ್ಚುವಲ್ ಮೂಲಕ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮದಲ್ಲಿ‌ ಮುಖ್ಯಮಂತ್ರಿ ಬಿ.ಎಸ್. ‌ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭಾಗಿಯಾಗಿದ್ದರು.

ಶಿಕ್ಷಣ ಸಚಿವ ಡಾ. ಸುಧಾಕರ್
ಶಿಕ್ಷಣ ಸಚಿವ ಡಾ. ಸುಧಾಕರ್

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್‌ ಸ್ಪೆಷಾಲಿಟಿ ಟ್ರಾಮಾ ಸೆಂಟರ್" ತೆರೆದಿರುವುದು ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಹೇಳಿದ್ದಾರೆ.

ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ವಿಮ್ಸ್) ಬಳ್ಳಾರಿಯಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕ"ವನ್ನು‌ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್‌ ವರ್ಚುವಲ್ ಮೂಲಕ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮದಲ್ಲಿ‌ ಮುಖ್ಯಮಂತ್ರಿ ಬಿ.ಎಸ್. ‌ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಸಚಿವ ಡಾ. ಸುಧಾಕರ್, ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯುನ್ನತ ಟ್ರಾಮಾ ಸೆಂಟರ್ ತೆರೆದಿರುವುದರಿಂದ ತುಂಬಾ ಉಪಯುಕ್ತವಾಗಿದೆ. ಪ್ರತಿ ವರ್ಷ ರಾಜ್ಯದಲ್ಲಿ 4.7 ಲಕ್ಷ ಜನರು ರಸ್ತೆ ಅಪಘಾತಕ್ಕೆ ಒಳಗಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತ ನಡೆದ 1 ಗಂಟೆ ಗೋಲ್ಡನ್‌ ಹವರ್‌ ಎಂದು ಪರಿಗಣಿಸುತ್ತೇವೆ. ಈ ಅವಧಿಯಲ್ಲಿ ಚಿಕಿತ್ಸೆ ನೀಡಿದರೆ ಬದುಕಿಸಬಹುದು. ಇಂಥ ತುರ್ತು ಚಿಕಿತ್ಸೆಗಾಗಿ ದೂರದ ಬೆಂಗಳೂರಿಗೆ ಬರುವ ಅಗತ್ಯವಿತ್ತು. ಈಗ ಬಳ್ಳಾರಿ ಸುತ್ತಮುತ್ತಲಿನ ಜಿಲ್ಲೆ ಹಾಗೂ ರಾಜ್ಯದಲ್ಲಿ ತುರ್ತು ಚಿಕಿತ್ಸೆ ಟ್ರಾಮಾ ಕೇಂದ್ರದಲ್ಲಿ ಪಡೆಯಬಹುದು ಎಂದರು.

ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ ​​: ಉದ್ಘಾಟಿಸಿದ ಸಚಿವ ಡಾ. ಹರ್ಷವರ್ಧನ್‌
ಸೂಪರ್ ಸ್ಪೆಷಾಲಿಟಿ ಟ್ರಾಮಾ ಸೆಂಟರ್ ​ ಉದ್ಘಾಟಿಸಿದ ಸಚಿವ ಡಾ. ಹರ್ಷವರ್ಧನ್‌

ನೂತನ ಟ್ರಾಮಾ ಸೆಂಟರ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಕೊಡುಗೆ ಅಪಾರ. ಒಟ್ಟು 200 ಬೆಡ್‌ ಸಾರ್ಮರ್ಥ್ಯದ ಟ್ರಾಮಾ ಸೆಂಟರ್‌ 72 ಐಸಿಯು ಬೆಡ್, 20 ವೆಂಟಿಲೇಟರ್ ಹಾಗೂ ಜನರಲ್ ವಾರ್ಡ್​ಗಳನ್ನು ಒಳಗೊಂಡಿದೆ. ಹತ್ತಿರದ ನೆರೆ ರಾಜ್ಯದಲ್ಲಿ ಅಪಘಾತವಾದರೂ ಸಹ ಈ ಟ್ರಾಮಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲು ಸಹಕಾರಿಯಾಗಲಿದೆ ಎಂದರು.

ವೈದ್ಯಕೀಯ ಸೇವೆಯಲ್ಲಿ ಇತರೆ ರಾಜ್ಯಗಳಿಂತ‌ ಕರ್ನಾಟಕ ಮುಂಚೂಣಿಯಲ್ಲಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಸೂಕ್ತ ಚಿಕಿತ್ಸೆಗಾಗಿ ಕಡಿಮೆ ಅವಧಿಯಲ್ಲಿ 20 ಸಾವಿರ ಐಸಿಯು ಬೆಡ್‌ಗಳ ನಿರ್ಮಾಣ ಮಾಡುವ ಮೂಲಕ ರಾಜ್ಯದ ಸಾಮರ್ಥ್ಯ ತೋರಿಸಿದ್ದೇವೆ ಎಂದರು.

2021 ರೊಳಗೆ ನೂತನ ವೈದ್ಯಕೀಯ ಕಾಲೇಜು ಪ್ರಾರಂಭ:

ಕಾರ್ಯಕ್ರಮದ ನಡುವೆ ಕೇಂದ್ರ ಸಚಿವ ಹರ್ಷ ವರ್ಧನ್ ಅವರು ಕರ್ನಾಟಕದಲ್ಲಿ ಶೀಘ್ರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸುವಂತೆ ಹೇಳಿದರು. ಅದಕ್ಕೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರ ಸೇರಿದಂತೆ 4 ನೂತನ ವೈದ್ಯಕೀಯ ಕಾಲೇಜುಗಳು 2021 ರೊಳಗೆ ಕಾರ್ಯಾರಂಭ ಮಾಡಲಿವೆ ಎಂದು ಹೇಳಿದರು. ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಭೇಟಿ‌ ನೀಡಿದ್ದ ವೇಳೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾಗಿ ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ವಿಮ್ಸ್‌ನ ನೂತನ ಸಿಟಿ ಸ್ಕ್ಯಾನರ್‌‌ಅನ್ನು ಸಚಿವರ ಡಾ. ಸುಧಾಕರ್ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವರಾದ ಅಶ್ವಿನ್ ಕುಮಾರ್ ಚೌಬೆ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಇತರರು ಪಾಲ್ಗೊಂಡಿದ್ದರು.

ಟ್ರಾಮಾ ಸೆಂಟರ್‌ನ ವಿಶೇಷತೆ:

150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರಾಮಾ ಕೇಂದ್ರ ಒಟ್ಟು 200 ಬೆಡ್‌ ಒಳಗೊಂಡಿದೆ. 72 ಐಸಿಯು ಬೆಡ್, 20 ವೆಂಟಿಲೇಟರ್, ಸಿಟಿ ಸ್ಕ್ಯಾನ್, ಡಿಜಿಟಲ್‌ ಎಕ್ಸ್‌ ರೇ ಸೌಕರ್ಯ ಇರಲಿದೆ. ಜೊತೆಗೆ ಸೂಪರ್‌ ಸ್ಪೆಷಾಲಿಟಿ ಎಮರ್ಜೆನ್ಸಿ ಹಾಗೂ ಟ್ರಾಮಾ, ನ್ಯೂರೋ ಸರ್ಜರಿ ಹಾಗೂ ಆರ್ಥೋಪೆಡಿಕ್‌ ಸೇವೆ ಸಹ ಒಳಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.