ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಉನ್ನತ ದರ್ಜೆಯ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವೊಂದು ಬೆಳಕಿಗೆ ಬಂದಿದೆ. ಓರ್ವ ಕಿಂಗ್ಪಿನ್ ಸೇರಿದಂತೆ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ವಲಯದ ಎನ್ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಂಜಾ ಪೂರೈಕೆ ಮಾಡಲು ಸಿದ್ಧವಾಗಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿದಂತೆ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ವಶಪಡಿಸಿಕೊಂಡಿದ್ದಾರೆ.
ಸೆ.30ರಂದು ಕಾರಿನಲ್ಲಿ 8 ಬಾಕ್ಸ್ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಆ ವೇಳೆ 137 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಬಂಧಿತರ ಮನೆ ಪರಿಶೀಲನೆ ನಡೆಸಿದಾಗ 4.81 ಲಕ್ಷ ಹಣ ಹಾಗೂ 3 ಕೆಜಿ ಗಾಂಜಾ ಪತ್ತೆಯಾಗಿತ್ತು.
ಆರೋಪಿಗಳು ಸ್ವಿಗ್ಗಿ ಡೆಲಿವರಿ ಬಾಯ್ಸ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಒಟ್ಟು 5.20 ಲಕ್ಷ ರೂಪಾಯಿ ಮೌಲ್ಯದ 140 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ದಸರಾ ನಂತರ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ : ಶಿಕ್ಷಣ ಸಚಿವ ಬಿ ಸಿ ನಾಗೇಶ್