ETV Bharat / state

ಸೆ.15ರೊಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ: ಸಚಿವ ಬಿ.ಸಿ.ನಾಗೇಶ್ - books Supply to schools

ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತ ಎಲ್ಲ ಮಕ್ಕಳು ಶಾಲೆಗೆ ಬಂದು ಭೌತಿಕ ಶಿಕ್ಷಣ ಪಡೆಯಬೇಕು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

supplying-text-books-to-all-schools-by-sept-15th-minister-b-c-nagesh
ಸಚಿವ ಬಿ.ಸಿ.ನಾಗೇಶ್
author img

By

Published : Aug 25, 2021, 9:29 PM IST

ಬೆಂಗಳೂರು: ಸೆಪ್ಟೆಂಬರ್ 15ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ನಿಗದಿತ ಅವಧಿಯೊಳಗೆ ಪಠ್ಯ ಪುಸಕ್ತಗಳು ತಲುಪುವ ವಿಶ್ವಾಸವಿದೆ. ಕೋವಿಡ್-19 ಕಾರಣದಿಂದ ಸರ್ಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ ವಿಳಂಬವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಾಲೆ ಆರಂಭಕ್ಕೆ ಮೊದಲೇ ಶೇ.50ರಷ್ಟು ಪಠ್ಯ ಪುಸ್ತಕಗಳು ಶಾಲೆಗಳನ್ನು ತಲುಪಬೇಕು ಎಂಬ ಗುರಿ ಹೊಂದಲಾಗಿತ್ತು. ಅದರಂತೆ ರಾಜ್ಯದ ಶೇ.50ಕ್ಕಿಂತ ಹೆಚ್ಚು ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸಲಾಗಿದೆ. ಈವರೆಗೆ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು ವಾರದೊಳಗೆ ಮುದ್ರಣಗೊಂಡಿರುವ ಎಲ್ಲ ಪುಸ್ತಕಗಳು ಶಾಲೆಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ.

ಆಯಾ ತರಗತಿಗಳಿಗೆ ಸಂಬಂಧಿಸಿದ ಎಲ್ಲ ವಿಷಯ, ಭಾಷೆ ಪುಸ್ತಕಗಳು ಮುದ್ರಣಗೊಂಡ ಕೂಡಲೇ ಶಾಲೆಗಳಿಗೆ ಪೂರೈಸಲಾಗುತ್ತದೆ. ಸೆಪ್ಟಂಬರ್ 15ರೊಳಗಾಗಿ ಎಲ್ಲ ಶಾಲೆಗಳಿಗೆ ಪುಸ್ತಕಗಳು ತಲುಪಿಸುವ ಗುರಿ ಹೊಂದಲಾಗಿದೆ ಎಂದರು.

ಶೇ. 70ಕ್ಕೂ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿದ್ದು, ಸರಬರಾಜಿಗೆ ಸಿದ್ಧವಾಗಿದೆ. ಆನ್‌ಲೈನ್ ಶಿಕ್ಷಣದ ಅಗತ್ಯಕ್ಕೆ ತಕ್ಕಂತೆ ಪಠ್ಯ ಸಿದ್ಧಪಡಿಸಿ ಆನ್‌ಲೈನ್‌ಗೆ ಅಪ್ಲೋಡ್​ ಮಾಡಲಾಗಿತ್ತು. ಅವುಗಳನ್ನು ಡೌನ್ಲೋಡ್​ ಮಾಡಿಕೊಳ್ಳುವಂತೆ ಮಕ್ಕಳಿಗೆ, ಪಾಲಕರಿಗೆ ತಿಳಿಸಲಾಗಿತ್ತು. ಹೀಗಾಗಿ, ಬಹುತೇಕ ಮಕ್ಕಳು ಆನ್‌ಲೈನ್‌ನಲ್ಲೇ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಬಿ.ಸಿ.ನಾಗೇಶ್ ಹೇಳಿದರು.

ಶಾಲೆಗಳ ಮುಖ್ಯ ಶಿಕ್ಷಕರಿಗೆ, ಆಡಳಿತ ಮಂಡಳಿಗಳಿಗೆ ಪಠ್ಯ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಆನ್‌ಲೈನ್‌ನಲ್ಲಿ ಪಠ್ಯ ಪುಸ್ತಕಗಳು ಲಭ್ಯವಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಡೌನ್‌ಲೋಡ್ ಮಾಡಿಕೊಳ್ಳಬಹುದು. ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತ ಎಲ್ಲ ಮಕ್ಕಳು ಶಾಲೆಗೆ ಬಂದು ಭೌತಿಕ ಶಿಕ್ಷಣ ಪಡೆಯಬೇಕು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ.. ಪ್ರತಿ ಕ್ವಿಂಟಲ್​ಗೆ 290 ರೂ. FRP ಏರಿಕೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.