ಬೆಂಗಳೂರು: ಹೈಕೋರ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಆಗಸ್ಟ್ 17ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಲು ಲಿಖಿತವಾಗಿ ಶಿಫಾರಸು ಮಾಡಿದೆ. 6 ಮಂದಿ ನ್ಯಾಯಮೂರ್ತಿಗಳು ಕಳೆದ 2019ರ ನವೆಂಬರ್ 11 ಹಾಗೂ 26 ರಂದು ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.
ಖಾಯಂಗೊಳ್ಳುತ್ತಿರುವ 6 ನ್ಯಾಯಮೂರ್ತಿಗಳ ಹೆಸರುಗಳು
- ನ್ಯಾಯಮೂರ್ತಿ ಎನ್. ಎಸ್. ಸಂಜಯ್ ಗೌಡ
- ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ
- ನ್ಯಾಯಮೂರ್ತಿ ಆರ್. ನಟರಾಜ್
- ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್
- ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು
- ನ್ಯಾಯಮೂರ್ತಿ ಎಂ. ನಾಗಪ್ರಸನ್ನ