ETV Bharat / state

ಎಂಪಿ ಹೈಕೋರ್ಟ್ ನ್ಯಾ. ಸತೀಶ್ ಚಂದ್ರರನ್ನು ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸಲು ಕೊಲಿಜಿಯಂ ಶಿಫಾರಸು - banglore news

ಸುಪ್ರೀಂ ಕೋರ್ಟ್ ಕೊಲಿಜಿಯಂ ಡಿಸೆಂಬರ್ 14 ರಂದು ನಡೆಸಿದ ಸಭೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

banglore
ನ್ಯಾ.ಸತೀಶ್ ಚಂದ್ರನ್ಯಾ.ಸತೀಶ್ ಚಂದ್ರ ಶರ್ಮಾ ಶರ್ಮಾ
author img

By

Published : Dec 17, 2020, 12:27 PM IST

ಬೆಂಗಳೂರು: ಮಧ್ಯಪ್ರದೇಶ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಡಿಸೆಂಬರ್ 14 ರಂದು ನಡೆಸಿದ ಸಭೆಯಲ್ಲಿ ಈ ಶಿಫಾರಸು ನಿರ್ಣಯ ಕೈಗೊಂಡಿದೆ. ನ್ಯಾ.ಸತೀಶ್ ಚಂದ್ರ ಶರ್ಮಾ ಅವರು ಮಧ್ಯಪ್ರದೇಶ ಹೈಕೋರ್ಟ್​ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 1961ರ ನ.30ರಂದು ಭೋಪಾಲ್‌ನಲ್ಲಿ ಜನಿಸಿರುವ ಅವರು, 1981 ರಲ್ಲಿ ಡಾ. ಹರಿಸಿಂಗ್ ಗೌರ್ ಯೂನಿವರ್ಸಿಟಿಯಲ್ಲಿ ಕಾನೂನು ಪದವಿಗೆ ಪ್ರವೇಶ ಪಡೆದಿದ್ದರು. 1984 ರ ಸೆ.1 ರಂದು ವಕೀಲಿಕೆ ಆರಂಭಿಸಿದ್ದರು.

ಓದಿ: ಡ್ರಗ್ ಕೇಸ್​: ಆದಿತ್ಯಾ ಆಳ್ವಾ ಜಾಮೀನು ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್

ಸಂವಿಧಾನ, ಸೇವಾ ನಿಯಮಗಳು, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಪರಿಣಿತರಾದ ಇವರು, 1993 ರ ಮೇ 28 ರಂದು ಹೆಚ್ಚುವರಿ ಕೇಂದ್ರ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರು. 2003ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ಪದೋನ್ನತಿ ಪಡೆದಿದ್ದರು. 2004 ರ ಜೂ.28 ರಂದು ಕೇಂದ್ರ ಸರ್ಕಾರದಿಂದ ಹಿರಿಯ ವಕೀಲರ ಪ್ಯಾನಲ್‌ಗೆ ನೇಮಕಗೊಂಡಿದ್ದರು. 2008 ರ ಜ.18 ರಂದು ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.