ETV Bharat / state

ಬಿಎಸ್​ವೈ ವಿರುದ್ಧದ ಎಫ್​ಐಆರ್​ ಊರ್ಜಿತ ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಸದ್ಯಕ್ಕೆ ರಿಲೀಪ್​ ನೀಡಿದೆ. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀ ಕೋರ್ಟ್​ ಕರ್ನಾಟಕ ಹೈಕೋರ್ಟ್​ಗೆ ನೋಟಿಸ್‌ ಜಾರಿ ಮಾಡಿದೆ.

ಬಿಎಸ್​ವೈ ವಿರುದ್ಧದ ಎಫ್​ಐಆರ್​ ಊರ್ಜಿತ ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ  ತಡೆ ನೀಡಿದ ಸುಪ್ರೀಂ
ಬಿಎಸ್​ವೈ ವಿರುದ್ಧದ ಎಫ್​ಐಆರ್​ ಊರ್ಜಿತ ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ
author img

By

Published : Jul 22, 2022, 4:54 PM IST

ಬೆಂಗಳೂರು: ಬಿಎಸ್​ವೈ ಅವರ ವಿರುದ್ಧದ ಡಿನೋಟಿಪಿಕೇಶನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಹೈಕೋರ್ಟ್​ಗೆ ನೋಟಿಸ್​ ಜಾರಿ ಮಾಡಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣ ಸಂಬಂಧ ಎಫ್‌ಐಆರ್‌ ರದ್ದುಪಡಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಸರ್ಜಿ ಸಲ್ಲಿಕೆ ಮಾಡಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ​ ಕರ್ನಾಟಕ ಹೈಕೋರ್ಟ್​ಗೆ ನೋಟಿಸ್‌ ಜಾರಿ ಮಾಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಡಿನೋಟಿಫಿಕೇಷನ್​ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶದ ವಿರುದ್ಧದ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್​, ಮಾಜಿ ಸಿಎಂ ವಿರುದ್ಧ ದಾಖಲಾಗಿದ್ದ ಎಫ್​ಐಆರ್​​ ವಜಾ ಮಾಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್​ವೈ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಹೈಕೋರ್ಟ್​ ಆದೇಶಕ್ಕೆ ತಡೆ ನೀಡಿದ್ದು, ನೋಟಿಸ್ ಕೂಡಾ ನೀಡಿದೆ.​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.