ಬೆಂಗಳೂರು: ರಾಮ ಮಂದಿರ-ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ತೀರ್ಪು ಇಂದು ಸುಪ್ರೀಂಕೋರ್ಟ್ನಿಂದ ಹೊರಬೀಳಲಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಸರ್ಕಾರ ಇಂದು ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ರಾಜ್ಯಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ರಜೆ ಘೋಷಿಸಿದೆ. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಕೊಡಗು ಪೊಲೀಸರು ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದ್ದು, ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಜಾಲತಾಣದಲ್ಲಿ ಹರಡಬೇಡಿ ಎಂದು ಮನವಿ ಮಾಡಿದ್ದಾರೆ. ಪಬ್ಲಿಕ್ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್‌ಗಳು ಗ್ರೂಪ್ ಸೆಟ್ಟಿಂಗ್ ಚೇಂಜ್ ಮಾಡಿಕೊಳ್ಳಿ. ಅಡ್ಮಿನ್ ಓನ್ಲಿ ಮೋಡ್‌ಗೆ ಬದಲಾಯಿಸಿಕೊಂಡು ಪ್ರಚೋದನಾತ್ಮಕ ಪೋಸ್ಟ್ ತಡೆಯಿರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಡಿ.ಪನ್ನೇಕರ್ ಸಲಹೆ ನೀಡಿದ್ದಾರೆ.
-
ನಾಳೆ, ಶನಿವಾರ, 9.11.2019 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆಯನ್ನು ಘೋಷಿಸಿದೆ.
— S.Suresh Kumar, Minister - Govt of Karnataka (@nimmasuresh) November 8, 2019 " class="align-text-top noRightClick twitterSection" data="
">ನಾಳೆ, ಶನಿವಾರ, 9.11.2019 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆಯನ್ನು ಘೋಷಿಸಿದೆ.
— S.Suresh Kumar, Minister - Govt of Karnataka (@nimmasuresh) November 8, 2019ನಾಳೆ, ಶನಿವಾರ, 9.11.2019 ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆಯನ್ನು ಘೋಷಿಸಿದೆ.
— S.Suresh Kumar, Minister - Govt of Karnataka (@nimmasuresh) November 8, 2019
ಇತ್ತ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕ ಕಟಿಯಾರ್ ಕೂಡ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆ ಕೆರಳುವಂತೆ ಪೋಸ್ಟ್ ಹಾಕಿದರೆ ವಾರಂಟ್ ಇಲ್ಲದೇ ಬಂಧಿಸುವ ಎಚ್ಚರಿಕೆ ನೀಡಿದ್ದಾರೆ.
ಇಂದು ನಿಗಯಾಗಿದ್ದ ಮೈಸೂರು ವಿವಿಯ, ಎಲ್ಲಾ ಪದವಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದ್ದು, ಮುಂದಿನ ದಿನಾಂಕವನ್ನ ಶೀಘ್ರವೇ ತಿಳಿಸಲಾಗುವುದು ಎಂದು ವಿಸಿ ಪ್ರೊ ಜಿ.ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇತ್ತ ಕುವೆಂಪು ವಿವಿ ಪರೀಕ್ಷೆ ಕೂಡ ಮುಂದೂಡಿಕೆ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನ (ಬಿ.ಇಡಿ ಸೇರಿದಂತೆ) ಮುಂದೂಡಲಾಗಿದೆ ಎಂದು ಕುವೆಂಪು ಪರೀಕ್ಷಾಂಗ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ.