ಬೆಂಗಳೂರು : ಶಿಕ್ಷಕರು ಶಾಲಾ ಅವಧಿಯಲ್ಲಿ ಸ್ವಂತ ಕೆಲಸ ಮಾಡಿಕೊಳ್ಳುವ ಪ್ರಕರಣಗಳ ಕುರಿತಂತೆ ಗಂಭೀರ ಕ್ರಮ ತೆಗೆದುಕೊಳ್ಳಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಕೆಲವು ಸರ್ಕಾರಿ ಶಾಲಾ ಶಿಕ್ಷಕರು ಶಾಲಾ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ಗಮನ ಹರಿಸದೆ, ತಮ್ಮ ವೈಯಕ್ತಿಕ ಕೆಲಸ ಕಾರ್ಯಗಳಿಗೆ ಪ್ರಾಧಾನ್ಯತೆ ನೀಡುತ್ತಿದ್ದಾರೆ. ಇಂತಹ ಕೆಲವು ಪ್ರಕರಣಗಳು ಗಮನಕ್ಕೆ ಬಂದಿದ್ದು, ಈ ರೀತಿಯ ಘಟನೆಗಳು ಶಿಕ್ಷಣ ಇಲಾಖೆಯ ಘನತೆಗೆ ತಕ್ಕದ್ದಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸರ್ಕಾರಿ ಕೆಲಸಗಳನ್ನು ಹೊರತುಪಡಿಸಿ ಬೇರಾವುದೇ ವೈಯಕ್ತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಖಡಕ್ ಸೂಚನೆ ನೀಡಿದ್ದಾರೆ.
ಇನ್ನು ರಾಜ್ಯಾದ್ಯಂತ ಎಲ್ಲಾ ಶಿಕ್ಷಕರಿಗೆ ಕಟ್ಟುನಿಟ್ಟಾದ ಸೂಚನೆಗಳನ್ನು ಹೊರಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರಿಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.