ETV Bharat / state

ಟಿಪ್ಪು ಪಾಠ ಕಡಿತದ ಬೆನ್ನಲ್ಲೇ.. ಪಠ್ಯಕಡಿತ ಇನ್ನೂ ಅಂತಿಮವಾಗಿಲ್ಲ ಎಂದ ಸಚಿವ ಸುರೇಶ್ ಕುಮಾರ್ - Tipu Sultan

ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಃ ಕೆಡವುವ ಕೆಲಸವನ್ನು ಮಾಡುವುದಿಲ್ಲ. ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ..

ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್
author img

By

Published : Jul 29, 2020, 7:57 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 1 ರಿಂದ 10 ನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಶೈಕ್ಷಣಿಕ ವರ್ಷ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆ ಎಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ ಎಂದು ಹೇಳಿದ್ದಾರೆ.

ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹ ಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ, ದಾಖಲೆ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾಃ ಕೆಡವಲು ಕೆಲಸ ಮಾಡುವುದಿಲ್ಲ. ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.