ETV Bharat / state

ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲಾ, ಯೆಚೂರಿ ಭೇಟಿ: ವಿವಿಧ ವಿಚಾರ ಚರ್ಚೆ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಾಂಗ್ರೆಸ್ ಪಕ್ಷದ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯ

author img

By

Published : Aug 29, 2022, 7:12 PM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ವಿವಿಧ ರಾಜಕೀಯ ನಾಯಕರು ಭೇಟಿ ನೀಡಿ ಚರ್ಚಿಸಿದ್ದಾರೆ. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಜೆ ಸಿಪಿಐಎಂ ಮಹಾ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ನಿವಾಸಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ರಣದೀಪ್ ಸಿಂಗ್ ಸುರ್ಜೆವಾಲಾ ಕಾಂಗ್ರೆಸ್ ಪಕ್ಷದ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ರಾಜ್ಯದಲ್ಲಿ ಪಕ್ಷ ಬಲವರ್ದನೆ ಹಾಗೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಮ್ಮ ಪಾತ್ರ ಅತ್ಯಂತ ಪ್ರಮುಖವಾದುದ್ದಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಹಾಗೂ ಸೀತಾರಾಮ್ ಯೆಚೂರಿ
ಸಿದ್ದರಾಮಯ್ಯ ಹಾಗೂ ಸೀತಾರಾಮ್ ಯೆಚೂರಿ

ಗೊಂದಲಗಳು ಏರ್ಪಡುತ್ತಿವೆ: ಪಕ್ಷವನ್ನು ಅಧಿಕಾರಕ್ಕೆ ಬಂದರೆ ತಮಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ಒದಗಿಸುವ ಕಾರ್ಯವನ್ನು ಹೈಕಮಾಂಡ್ ಮಾಡಲಿದೆ. ಪಕ್ಷದ ಹೈಕಮಾಂಡ್ ತಮ್ಮ ನಾಯಕತ್ವವನ್ನು ಗುರುತಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅತ್ಯಂತ ಗೌರವಯುತ ಸ್ಥಾನವನ್ನು ತಮಗೆ ಕಲ್ಪಿಸಲಾಗುವುದು. ಎಲ್ಲಕ್ಕಿಂತ ಪ್ರಮುಖವಾಗಿ ರಾಷ್ಟ್ರ ರಾಜಕಾರಣದಲ್ಲಿ ನಾಯಕತ್ವದ ವಿಚಾರವಾಗಿ ಸಾಕಷ್ಟು ಗೊಂದಲಗಳು ಏರ್ಪಡುತ್ತಿವೆ. ಸಾಕಷ್ಟು ಮಂದಿ ರಾಹುಲ್ ಗಾಂಧಿ ನಾಯಕತ್ವ ಪರ ವಿರೋಧವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸಾಕಷ್ಟು ಮಂದಿ ಮುನಿಸಿಕೊಂಡು ಪಕ್ಷವನ್ನು ಬಿಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸಬೇಕಿದೆ. ನಾಯಕತ್ವದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರ ನಿಲುವು ಈಗಾಗಲೇ ಸ್ಪಷ್ಟವಾಗಿದೆ. ಅದಕ್ಕೆ ತಾವು ಬದ್ಧರಾಗಿರುತ್ತೀರಿ ಎಂಬ ವಿಶ್ವಾಸ ಇದೆ. ಅಗತ್ಯ ಸಂದರ್ಭದಲ್ಲಿ ತಮ್ಮ ಸಲಹೆ ಸೂಚನೆಯನ್ನು ಪಕ್ಷದ ಹೈಕಮಾಂಡ್ ಬಯಸಲಿದೆ. ಮುಕ್ತ ಮನಸ್ಸಿನಿಂದ ಸಹಕಾರ ನೀಡಿ ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಸಹ ಪೂರ್ಣ ಮನಸ್ಸಿನಿಂದ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಇದೆ.

ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯ
ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯ

ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ: ಇಂದು ಸಂಜೆ ಸಿಪಿಐಎಂ ಮಹಾ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಶಿವಾನಂದ ವೃತ್ತ ಸಮೀಪದ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಬೆಂಗಳೂರಿನ ಚಾಲುಕ್ಯ ವೃತ್ತ ಸಮೀಪ ಇರುವ ಭಾರತೀಯ ವಿದ್ಯಾ ಭವನದಲ್ಲಿ ಇಂದು ಆಯೋಜಿಸಿರುವ ರಾಮಕೃಷ್ಣ ಹೆಗಡೆ 96 ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಉಭಯ ನಾಯಕರು ಪಾಲ್ಗೊಂಡಿದ್ದು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಯೆಚೂರಿ ಅವರು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ಕೊಟ್ಟರು. ಕೆಲ ಕಾಲ ಇಬ್ಬರು ನಾಯಕರು ಪ್ರಸಕ್ತ ರಾಜಕೀಯ ಹಾಗೂ ರಾಜ್ಯ ರಾಜಕಾರಣದ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಓದಿ: ಸದನ ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ: ಸಚಿವ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.