ಬೆಂಗಳೂರು: ನಗರದಲ್ಲಿ ಹೈ ಅಲರ್ಟ್ ಘೋಷಣೆ ಬೆನ್ನಲ್ಲೇ ಕಳೆದ ರಾತ್ರಿ ಹೆಚ್ಎಸ್ಆರ್ ಲೇಔಟ್ನಲ್ಲಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದೆ.
ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾದ ಬಗ್ಗೆ ಹೆಚ್ಎಸ್ಆರ್ ಲೇಔಟ್ ನಿವಾಸಿ ಸುಬ್ಬರಾವ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ, ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ರಾತ್ರೋ ರಾತ್ರಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದರು.
- " class="align-text-top noRightClick twitterSection" data="">
ಸೂಟ್ ಕೇಸ್ ತಪಾಸಣೆ ನಡೆಸಿದಾಗ ಅದರಲ್ಲಿ ಗೃಹ ಉಪಯೋಗಿ ವಸ್ತುಗಳು ಇರುವುದು ಗೊತ್ತಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕರೆ ಬಂದ 5 ನಿಮಿಷಕ್ಕೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಸ್ಪಂದನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.