ETV Bharat / state

ಬೆಂಗಳೂರು ಮೆಟ್ರೋ ಸ್ಟೇಷನ್​ನಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ..!

ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್​ನಲ್ಲಿ ಅನುಮಾನಾಸ್ಪದ ಸೂಟ್​ಕೇಸ್ ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮೆಟ್ರೋ ಸ್ಟೇಷನ್​
ಮೆಟ್ರೋ ಸ್ಟೇಷನ್​
author img

By

Published : Sep 5, 2021, 1:46 PM IST

ಬೆಂಗಳೂರು : ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆಯಾಗಿದೆ. ಮೆಟ್ರೋ ನಿಲ್ದಾಣದ ಉತ್ತರ ವಿಭಾಗದ ಮೆಟ್ಟಿಲುಗಳ ಬಳಿ ಸೂಟ್​ಕೇಸ್​ ಪತ್ತೆಯಾಗಿದ್ದು, ಸ್ಥಳೀಯರು ಹಾಗೂ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾಗಿದ್ದರು.

ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಹಿಳೆಯೊಬ್ಬರು ಸೂಟ್​ಕೇಸ್​​ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿಯಿದೆ. ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸೂಟ್​ಕೇಸ್​​ನಲ್ಲಿ ಬಟ್ಟೆ ಇರುವುದು ತಿಳಿದಿದೆ.

ಇದನ್ನೂ ಓದಿ: ಪುತ್ತೂರು: ರೈಲ್ವೆ ಹಳಿಯ ಕ್ಲಿಪ್ ಕದಿಯುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್​

ಸಿಸಿಟಿವಿಯನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ಸೂಟ್​​ ಬಿಟ್ಟು ಹೋಗಿರುವುದು ಗೊತ್ತಾಗಿದೆ. ತೀವ್ರ ವಿಚಾರಣೆ ನಡೆಸಿದಾಗ ಆಕೆ, ಪತಿಯೊಂದಿಗೆ ಜಗಳವಾಡಿಕೊಂಡು ನಿಲ್ದಾಣದಲ್ಲೇ ಸೂಟ್​ಕೇಸ್​ ಬಿಟ್ಟು ಹೋಗಿದ್ದಾಳೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.