ETV Bharat / state

ಇನ್ಮುಂದೆ ಸ್ವಾಭಿಮಾನಿ ಸರ್ಕಾರಿ ಶಾಲೆ ಪ್ರಶಸ್ತಿ.. ಸಚಿವ ಸುರೇಶ್‌ಕುಮಾರ್ - government school

ಶಾಲೆಯಲ್ಲಿರುವ ಮೂಲಸೌಲಭ್ಯಗಳು, ಶೈಕ್ಷಣಿಕ ಪ್ರಗತಿ, ಸಮುದಾಯದ ಸಹಭಾಗಿತ್ವ, ಶಾಲೆಗಳ ಸರ್ವಾಂಗೀಣ ಪ್ರಗತಿಯಲ್ಲಿ ಎಸ್‍ಡಿಎಂಸಿ-ಶಿಕ್ಷಕರ ಅನ್ಯೋನ್ಯ ಸಂಬಂಧಗಳು ಸೇರಿದಂತೆ ಹಲವು ಆಯಾಮಗಳಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಅಳೆದು ಈ ಸಾಲಿನಿಂದ ಪ್ರಗತಿಯಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಲಾಗುವುದು ಎಂದರು.

Swabhimani Government School Award will be given   : Minister Suresh Kumar
ಇನ್ಮುಂದೆ ಸ್ವಾಭಿಮಾನಿ ಸರ್ಕಾರಿ ಶಾಲೆ ಪ್ರಶಸ್ತಿ: ಸಚಿವ ಸುರೇಶ್ ಕುಮಾರ್
author img

By

Published : Jul 29, 2020, 9:47 PM IST

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿನ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ನಿರ್ವಹಣೆಯಲ್ಲಿನ ವಿಶೇಷ ಸಾಧನೆ ಗುರುತಿಸಿ ಈ ವರ್ಷದಿಂದಲೇ ರಾಜ್ಯಮಟ್ಟದಲ್ಲಿ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಎಂಬ ಪ್ರಶಸ್ತಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌ ಸುರೇಶ್‌ಕುಮಾರ್ ಹೇಳಿದ್ದಾರೆ.

ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣದ ಮೂಲಕ ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಇಂದು ರಾಜ್ಯದ ಸರ್ಕಾರಿ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷರು/ಸದಸ್ಯರೊಂದಿಗೆ ನಡೆಸಿದ ವೆಬಿನಾರ್ ಸಂವಾದ ನಡೆಸಲಾಯಿತು. ಈ ವೇಳೆ ಮಾತಾನಾಡಿದ ಸಚಿವರು, ಶಾಲೆಯಲ್ಲಿರುವ ಮೂಲಸೌಲಭ್ಯಗಳು, ಶೈಕ್ಷಣಿಕ ಪ್ರಗತಿ, ಸಮುದಾಯದ ಸಹಭಾಗಿತ್ವ, ಶಾಲೆಗಳ ಸರ್ವಾಂಗೀಣ ಪ್ರಗತಿಯಲ್ಲಿ ಎಸ್‍ಡಿಎಂಸಿ-ಶಿಕ್ಷಕರ ಅನ್ಯೋನ್ಯ ಸಂಬಂಧಗಳು ಸೇರಿ ಹಲವು ಆಯಾಮಗಳಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಅಳೆದು ಈ ಸಾಲಿನಿಂದ ಪ್ರಗತಿಯಲ್ಲಿ ಅದ್ವಿತೀಯ ಸಾಧನೆ ಗುರುತಿಸಲಾಗುವುದು ಎಂದರು.

ಅದೇ ರೀತಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿರುವ ಶಿಕ್ಷಕರ ಸೇವೆ ಗುರುತಿಸಿ ವಿದ್ಯಾರ್ಥಿಗಳ ಕಲಿಕೆಗೆ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ಒಂದು ಧನಾತ್ಮಕವಾದ ಸ್ಪರ್ಧಾತ್ಮಕ ಸ್ಫೂರ್ತಿ ಮೂಡಿದಲ್ಲಿ ನಾವು, ನೀವೆಲ್ಲರೂ ಕೊರೊನಾದಂತಹ ಸಂಕಷ್ಟದ ಸಮಯವನ್ನು ಸಮರ್ಥವಾಗಿ ದಾಟಬಹುದಾಗಿದೆ ಎಂದರು.

ಶಾಲೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ನಾವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ನಿರೀಕ್ಷಿಸುತ್ತಿದ್ದೇವೆ. ಅದರನ್ವಯ ನಮ್ಮ ರಾಜ್ಯದ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲಕರವಾಗುವ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.