ETV Bharat / state

14,150 ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಲಾಗಿದೆ: ಬಿಬಿಎಂಪಿ ಶಿಕ್ಷಣ ವಿಶೇಷ ಆಯುಕ್ತ - protest against BBMP

ಸ್ವೆಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪಾಲಿಕೆ ಶಿಕ್ಷಣ ವಿಭಾಗದ ವಿಶೇಷ ಆಯುಕ್ತ ಬಾಗೇಪಲ್ಲಿ ರೆಡ್ಡಿ ಶಂಕರ ಬಾಬು ಸ್ಪಷ್ಟನೆ ನೀಡಿದ್ದಾರೆ.

Sweater
ಸ್ವೆಟರ್
author img

By

Published : Aug 25, 2021, 9:32 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ 1.6 ಕೋಟಿ ರೂ. ವೆಚ್ಚದಲ್ಲಿ ಸ್ವೆಟರ್ ಖರೀದಿಸಿ 14,150 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದು ಪಾಲಿಕೆ ಶಿಕ್ಷಣ ವಿಭಾಗದ ವಿಶೇಷ ಆಯುಕ್ತ ಬಾಗೇಪಲ್ಲಿ ರೆಡ್ಡಿ ಶಂಕರ ಬಾಬು ಸ್ಪಷ್ಟನೆ ನೀಡಿದ್ದಾರೆ.

ಸ್ವೆಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕಳೆದ ಸಾಲಿನಲ್ಲಿ ಪಾಲಿಕೆಯ ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ಖರೀದಿಸುವ ಸಂಬಂಧ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನೀಡಿರುವ ದರ ಪಟ್ಟಿ ಆಧರಿಸಿ ಗುಣಮಟ್ಟದ ಸ್ವೆಟರ್‌ಗಳನ್ನು ಖರೀದಿಸಲಾಗಿದೆ.

2020-21ನೇ ಸಾಲಿನಲ್ಲಿ ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿ ಒಟ್ಟು 13,651 ವಿದ್ಯಾಾರ್ಥಿಗಳು ದಾಖಲಾಗಿದ್ದು, ಈ ಪೈಕಿ ತರಗತಿಗೆ ಹಾಜರಾಗಿದ್ದ 12,046 ವಿದ್ಯಾರ್ಥಿಗಳಿಗೆ ಸ್ವೆಟರ್ ಖರೀದಿಸಲು ಒಟ್ಟು 1,48,56,850 ರೂ. ಗೆ ಅನುಮೋದನೆ ನೀಡಲಾಗಿತ್ತು. ಈ ಸಂಬಂಧ ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಿಸಿರುವ ಬಗ್ಗೆ ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಸ್ವೀಕೃತಿ ಪತ್ರಗಳನ್ನು ಪಾಲಿಕೆ ಶಿಕ್ಷಣ ವಿಭಾಗಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ 2020 ರ ಡಿಸೆಂಬರ್ 20 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಂತೆ ಕೋವಿಡ್ ಮಾರ್ಗಸೂಚಿ ಅನ್ವಯ 6 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಲಾಗಿತ್ತು. ಆ ದಿನಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅನುಗುಣವಾಗಿ ಸ್ವೆಟರ್‌ಗಳನ್ನು ವಿತರಿಸಲಾಗಿದೆ. ತದ ನಂತರ ಲಾಕ್‌ಡೌನ್ ಜಾರಿಯಾದ ಪರಿಣಾಮ ಅನ್‌ಲಾಕ್ ಬಳಿಕ ಉಳಿದ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸುವುದಾಗಿ ಶಾಲಾ-ಕಾಲೇಜು ಮುಖ್ಯಸ್ಥರು ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು 16,167 ಸ್ವೆಟರ್‌ಗಳನ್ನು ವಿತರಣೆ ಮಾಡಿದೆ. ಈ ಪೈಕಿ 14,150 ವಿದ್ಯಾರ್ಥಿಗಳಿಗೆ ವಿತರಣೆ ಮಾಡಿರುವ ಸೈಟರ್‌ಗಳಿಗೆ ಒಟ್ಟು 1,72,11,648 ರೂ. ಗಳ ಸ್ವೀಕೃತಿ ದೃಢೀಕರಣ ಪತ್ರಗಳೊಂದಿಗೆ ಕಳೆದ ಮಾರ್ಚ್ 29 ರಂದು ಹಣ ಪಾವತಿಗೆ ಬಿಲ್ ಸಲ್ಲಿಸಿತ್ತು. ಇದರಲ್ಲಿ ಟಿಡಿಎಸ್ ಮೊತ್ತ ಕಡಿತಗೊಳಿಸಿ ಉಳಿದ 1,68,66,741 ರೂ. ಗೆ ಅನುಮೋದನೆ ನೀಡಿ ಹಣ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪಾಲಿಕೆ ವಿರುದ್ಧ ತಮಟೆ ಚಳುವಳಿ:

ಬಿಬಿಎಂಪಿ ಶಾಲಾ ಮಕ್ಕಳಿಗೆ ಪಾಲಿಕೆ ವತಿಯಿಂದ ಪ್ರತಿ ವರ್ಷ ನೀಡುವ ಸ್ವೆಟರ್​ಗಳನ್ನು ನೀಡದೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪಾಲಿಕೆ ಕೇಂದ್ರ ಕಚೇರಿ ಮುಂಭಾಗದಲ್ಲಿ ತಮಟೆ ಚಳುವಳಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕಾಧ್ಯಕ್ಷ ಡಾ.ಸಿ.ಎಸ್.ರಘು, ಬಿಬಿಎಂಪಿ ಶಾಲಾ, ಕಾಲೇಜುಗಳಲ್ಲಿ ದಲಿತ, ಹಿಂದುಳಿದ ಮತ್ತು ಕಡು ಬಡವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದಾರೆ. 2020-21ಸಾಲಿನಲ್ಲಿ ಬಿಬಿಎಂಪಿ ಮಕ್ಕಳಿಗೆ ಸ್ವೆಟರ್​ ನೀಡಲು ಅನುದಾನ ಮೀಸಲಿಟ್ಟಿದೆ. ಆದರೆ ಬಿಬಿಎಂಪಿಯ ಕೆಲವು ಭ್ರಷ್ಟ ಅಧಿಕಾರಿಗಳು ಟೆಂಡರ್ ಕರೆಯದೆ 4 ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್ ಸರಬರಾಜು ಮಾಡಲು ಆದೇಶ ನೀಡಿದ್ದಾರೆ. ಅಂದಾಜು 16 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸ್ವೆಟರ್ ವಿತರಣೆ ಮಾಡದೆ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.