ಬೆಂಗಳೂರು: ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಚಾಕುವಿನಿಂದ ಇರಿದು ಮೊಬೈಲ್ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಬಂಧಿತ ಆರೋಪಿಗಳು.
ರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಇವರು ಬೈಕ್ನಲ್ಲಿ ಗುದ್ದಿ ಅಮಾಯಕರನ್ನು ಹೆದರಿಸಿ ಮೊಬೈಲ್ ಕಸಿದುಕೊಳ್ಳುತ್ತಿದ್ದರು. ಬೈಕ್ ಸವಾರರು ವಿರೋಧ ವ್ಯಕ್ತಪಡಿಸಿದರೆ ಮಾರಕಾಸ್ತ್ರಗಳಿಂದ ಇರಿದು ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು.
ಇದೇ ತಿಂಗಳ(ಅಕ್ಟೋಬರ್)10 ರಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಬಟನ್ ಚಾಕುವಿನಿಂದ ಸ್ವಿಗಿ ಬಾಯ್‍ಗೆ ಇರಿದಿದ್ದರು. ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಅಶೋಕ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಂದು ಬೈಕ್, ಮೊಬೈಲ್ ಫೋನ್ ಹಾಗೂ ಚಾಕುವನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬಹಿರಂಗವಾಗಿದೆ.
ಇದನ್ನೂ ಓದಿ: ಹಣಕ್ಕಾಗಿ ಮಗಳನ್ನೇ ಮಾರಿದ ಪಾಪಿ ತಂದೆ.. ಬಾಲಕಿ ಖರೀದಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದ ಸಂಬಂಧಿ!