ಬೆಂಗಳೂರು : ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಯಾದ ಕೋಲಾರ ಮೂಲದ ಉದ್ಯಮಿ ಗೋವಿಂದರಾಜು ಇಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ತಮ್ಮ ಕೊಠಡಿಯಲ್ಲಿ ಪ್ರಮಾಣ ವಚನ ಬೋಧಿಸಿದರು. ಗೋವಿಂದರಾಜು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ನನಗೆ ರಾಜಕೀಯ ರಂಗ ಹೊಸದು. ಆದರೂ ನನ್ನ ಮೇಲೆ ದೊಡ್ಡ ಜವಾಬ್ದಾರಿವಹಿಸಲಾಗಿದೆ. ಜಾತ್ಯಾತೀತ ಜನತಾದಳದ ನಾಯಕರು ನನ್ನ ಮೇಲೆ ಜವಾಬ್ದಾರಿ ವಹಿಸಿದ್ದಾರೆ. ಕೋಲಾರ ಭಾಗದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗೋವಿಂದರಾಜು ಹೇಳಿದರು.
ಇದೇ ಸಂದರ್ಭ ಅವರ ಆಪ್ತರು, ಕುಟುಂಬ ಸದಸ್ಯರು, ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹಾಗೂ ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬಸವರಾಜ ಹೊರಟ್ಟಿ ಹಾಗೂ ಶ್ರೀಕಂಠೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.