ETV Bharat / state

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ - ಡಿಜಿಟಲ್ ಲೈಫ್ ಪ್ರಮಾಣಪತ್ರ

Digital Life Certificate: ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

Digital Life Certificate
Digital Life Certificate
author img

By ETV Bharat Karnataka Team

Published : Nov 29, 2023, 7:27 PM IST

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‌ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆ ಅಡಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ.

ತಿಳಿವಳಿಕೆ ಪತ್ರದ (ಎಂಒಯು) ಅಡಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನವೆಂಬರ್ 1 ರಿಂದ 30 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆಗಳನ್ನು ಒದಗಿಸುತ್ತದೆ.

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರ ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ ಮಾಡಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮ್ಯಾನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅನ್ನು ಸೆಪ್ಟೆಂಬರ್ 01, 2018 ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿಗೂ ಹೆಚ್ಚು ಗ್ರಾಹಕರಿಗೆ ಹಾಗೂ ಇನ್ನಿತರರಿಗೆ, ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ. ಕರ್ನಾಟಕದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9500ಕ್ಕೂ ಹೆಚ್ಚು ಪೋಸ್ಟ್‌ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಪೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್‌ ಮ್ಯಾನ್ ಮೂಲಕ ಕೇವಲ 70 ರೂ. (ಜಿಎಸ್‍ಟಿ ಸೇರಿದಂತೆ) ಶುಲ್ಕ ನೀಡಿ ಈ ಸೌಲಭ್ಯ ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಹೀಗೆಂದರೆ?: ಡಿಜಿಟಲ್‌ ಲೈಫ್‌ ಸರ್ಟಿಫಿಕೇಟ್‌ ಅನ್ನು ಜೀವನ್‌ ಪ್ರಮಾಣ ಪತ್ರ ಎಂದು ಕರೆಯಲಾಗುತ್ತಿದ್ದು, ಇದೊಂದು ಪಿಂಚಣಿದಾರರಿಗೆ ಸಂಬಂಧಿಸಿದ ಪ್ರಮುಖ ದಾಖಲೆಯಾಗಿದೆ. ಪ್ರತಿ ವರ್ಷವೂ ಬ್ಯಾಂಕ್‌, ಅಂಚೆ ಕಚೇರಿಗಳಿಗೆ ತಿಂಗಳ ಪಿಂಚಣಿ ಪಡೆಯುವುದಕ್ಕೆ ಸಲ್ಲಿಸಬೇಕಾದ ದಾಖಲೆಯಾಗಿರುತ್ತದೆ.

ಇದನ್ನೂ ಓದಿ: ಕುಟುಂಬ ಪಿಂಚಣಿ ಪಡೆಯಲು ಎರಡನೇ ಪತ್ನಿ ಅರ್ಹರಲ್ಲ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.