ETV Bharat / state

ಕರ್ತವ್ಯನಿರತ ತಹಶೀಲ್ದಾರ್​ ಕೊಲೆ: ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ - Tahsildar Chandramauleshwar

ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಸರ್ವೆ ಮಾಡಲು ಹೋಗಿದ್ದರು. ಈ ವೇಳೆ ಅವರನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಇದೀಗ ಸಿಎಂ ತಹಶೀಲ್ದಾರ್​ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jul 9, 2020, 7:16 PM IST

ಬೆಂಗಳೂರು: ಸರ್ವೆ ಕಾರ್ಯ ನಡೆಸಲು ಹೋದಾಗ ವ್ಯಕ್ತಿಯೊಬ್ಬನ ಚಾಕು ಇರಿತದಿಂದ ಮೃತಪಟ್ಟ ಬಂಗಾರಪೇಟೆ ತಹಶೀಲ್ದಾರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಸರ್ವೆ ಮಾಡಲು ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಅವರನ್ನು ಚಾಕುವಿನಿಂದ ಇರಿದು ಸಾಯಿಸಿರುವುದು ವಿಷಾದನೀಯ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಕುಟುಂಬಕ್ಕೆ ಆದ ಹಾನಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸುತ್ತಿರುವುದಾಗಿ ಸಿಎಂ ಬಿಎಸ್​ವೈ ಸಂತಾಪ ಸೂಚಿಸಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಬೇಕು ಎಂದು ಸೂಚಿಸಿರುವ ಯಡಿಯೂರಪ್ಪ, ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡುವ ಭರವಸೆ ಕೊಟ್ಟಿದ್ದಾರೆ. ಆರೋಪಿಗಳ ಮೇಲೆ ಕಾನೂನಿನಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.