ETV Bharat / state

ಸಮುದ್ರದಲ್ಲಿ ಸಿಲುಕಿರುವವರ ರಕ್ಷಣೆಗೆ ಕ್ರಮಕೈಗೊಳ್ಳಿ, ಕಾಪ್ಟರ್ ವ್ಯವಸ್ಥೆ ಮಾಡಿ : ಸಿಎಂ ಸೂಚನೆ

ಮಂಗಳೂರು ಜಿಲ್ಲಾಧಿಕಾರಿ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಎಂಆರ್​ಪಿಎಲ್​ ನೌಕರರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

author img

By

Published : May 16, 2021, 8:20 PM IST

Updated : May 16, 2021, 8:42 PM IST

Chief Minister BS Yeddyurappa
ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ

ಬೆಂಗಳೂರು : ಸಮುದ್ರದಲ್ಲಿ ಸಿಲುಕಿರುವ ಮಂಗಳೂರು ಎಂಆರ್​ಪಿಎಲ್​ನ ನೌಕರರ ರಕ್ಷಣೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಸಂಜೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹಾಗೂ ಉಡುಪಿ‌, ಕಾರವಾರ ಮತ್ತು ಮಂಗಳೂರು ಡಿಸಿಗಳಿಗೆ ಕರೆ ಮಾಡಿ ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆದರು.

ಮಂಗಳೂರು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿರುವವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಮುದ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಮಂಗಳೂರಿನ ನೌಕರರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರದಲ್ಲಿ ಸಿಲುಕಿದವರ ರಕ್ಷಣೆಗೆ ಕೇಂದ್ರದ ಜೊತೆ ನಿಕಟ ಸಂಪರ್ಕದಲ್ಲಿರುವಂತೆ ಸೂಚಿಸಿದರು. ಅಲ್ಲದೆ, ಹೆಲಿಕಾಪ್ಟರ್ ಸೇರಿದಂತೆ ಇನ್ನಿತರ ಯಾವುದೇ ಅಗತ್ಯವಿದ್ದರೂ ಕೂಡಲೇ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

ಓದಿ: ತೌಕ್ತೆ ಚಂಡಮಾರುತ ಎಫೆಕ್ಟ್: ಉತ್ತರ ಕನ್ನಡದಲ್ಲಿ ಒಂದೇ ದಿನ 92 ಮನೆಗಳಿಗೆ ಹಾನಿ!

Last Updated : May 16, 2021, 8:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.