ಚೆನ್ನೈ: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಬೇಡಿ. ತಮಿಳುನಾಡಿನಲ್ಲೂ ನೀರಿಗೆ ಅಭಾವವಿದೆ. ನಾವು ಪ್ರತಿನಿತ್ಯ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಇದಕ್ಕೂ ಮೊದಲು ಸಿಎಂ ಬಿ.ಎಸ್ ಯಡಿಯೂರಪ್ಪ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಎರಡು ರಾಜ್ಯಗಳ ನಡುವೆ ಉತ್ತಮ ಸಂಬಂಧವೃದ್ಧಿಗಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು.
ಇದನ್ನೂ ಓದಿ: ಮೇಕೆದಾಟು ಯೋಜನೆ : ತಮಿಳುನಾಡು ಸಿಎಂಗೆ ಪತ್ರ ಬರೆದ ಸಿಎಂ ಬಿಎಸ್ವೈ