ETV Bharat / state

ಸ್ಥಳೀಯ ಮಟ್ಟದಲ್ಲಿ ಕೋವಿಡ್ ನಿರ್ವಹಣೆಗೆ ಟಾಸ್ಕ್ ಫೋರ್ಸ್ ರಚನೆ : ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸಕಲ ಪ್ರಯತ್ನಗಳನ್ನೂ ನಡೆಸುತ್ತಿರುವ ಸರ್ಕಾರ, ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲು ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಚಿವ ಸುಧಾಕರ್
ಸಚಿವ ಸುಧಾಕರ್
author img

By

Published : Jul 4, 2020, 1:05 AM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸಕಲ ಪ್ರಯತ್ನಗಳನ್ನೂ ನಡೆಸುತ್ತಿರುವ ಸರ್ಕಾರ, ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಮ್​ ಐಸೋಲೇಷನ್ ಮಾಡಲು ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ವಿಧಾನಸೌಧದಲ್ಲಿ ಇಂದು ಸಂಜೆ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಹೋಮ್​ ಐಸೋಲೇಷನ್ ನಲ್ಲಿರುವವರ ಮೇಲೆ ನಿಗಾವಹಿಸಲು ಪ್ರತ್ಯೇಕ ಕಾಲ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಹೇಳಿದರು.

ತಜ್ಞರ ಸಮಿತಿಯ ವರದಿಯ ಮೇರೆಗೆ ಹೋಮ್​ ಐಸೋಲೇಷನ್‌ಗೆ ಸರ್ಕಾರ ಸಮ್ಮತಿಸಿದೆ. ಆದರೆ, ಹೋಮ್​ ಐಸೋಲೇಷನ್​ಗೆ ಒಳಗಾಗಲು ಸರ್ಕಾರ ಕೆಲವು ನಿಯಮಗಳನ್ನು ಪ್ರಕಟಿಸಿದ್ದು ಇದಕ್ಕೆ ಅನುಗುಣವಾಗಿ ಜಾರಿಗೊಳಿಸಲಾಗುವುದು. ಬೆಂಗಳೂರಿನಲ್ಲಿ ಆಂಬುಲೆನ್ಸ್ ಕೊರತೆ ನೀಗಿಸಲು ಸರ್ಕಾರ ಪ್ರತಿ ವಾರ್ಡಿಗೆ 2 ರಂತೆ 400 ಆಂಬುಲೆನ್ಸ್ ಕಾಯ್ದಿರಿಸಲಿದೆ. ಇದಕ್ಕೆ ಐಪಿಎಸ್ ಮಟ್ಟದ ಅಧಿಕಾರಿಯೊಬ್ಬರನ್ನು ನಿರ್ವಹಣೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಸುಧಾಕರ್​

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ನಿರ್ವಹಣೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ರೂಪಿಸಿದ್ದು ತೀವ್ರ ಸೋಂಕಿತರಿಗೆ ಹಾಸಿಗೆ ದೊರಕಿಸುವ ನಿಟ್ಟಿನಲ್ಲಿ ಇದು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಿದೆ. ರಾಜ್ಯದ, ದೇಶದ ಹಾಗೂ ಜಾಗತಿಕ ಮಟ್ಟದ ಕೋವಿಡ್ ಅಂಕಿ ಅಂಶಗಳನ್ನು ನೀಡಿದ ಸುಧಾಕರ್ ಅವರು, ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಹಾಗೂ ಮರಣ ಪ್ರಮಾಣಗಳು ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಸೋಂಕಿತರನ್ನು ಸಂಪೂರ್ಣವಾಗಿ ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಲಕ್ಷಣವಿರುವವರಿಗೆ ಹಾಸಿಗೆ ಮತ್ತು ಚಿಕಿತ್ಸೆ ಲಭ್ಯವಾಗಬೇಕು ಎನ್ನುವ ದೃಷ್ಟಿಯಲ್ಲಿ ಹೋಮ್​ ಐಸೋಲೇಷನ್ ಅನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶವಸಂಸ್ಕಾರಕ್ಕೂ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಹೇಳಿದರು.

ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚನೆ: ಗ್ರಾಮೀಣ ಭಾಗದಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ರಚಿಸಲಾಗಿದ್ದು, ಇದರಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಪೋಲೀಸ್ ಸಿಬ್ಬಂದಿ, ಲೈನ್ ಮ್ಯಾನ್ ಮತ್ತು ಸ್ವಯಂ ಸೇವಕರು ಸೇರಿದಂತೆ ಒಂದು ತಂಡವನ್ನು ಒಳಗೊಳ್ಳಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದಂತೆ 'ಥಿಂಕ್ ಲೋಕಲ್, ಆಕ್ಟ್ ಗ್ಲೋಬಲ್' ಎನ್ನುವ ತತ್ವದ ಮೇಲೆ ಈ ಕಮಿಟಿಗಳು ಕಾರ್ಯನಿರ್ವಹಿಸಲಿವೆ. ಸಂಪೂರ್ಣ ಉಸ್ತುವಾರಿಯನ್ನು ಹಿರಿಯ ಅಧಿಕಾರಿಯೊಬ್ಬರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 8,800 ಇಂತಹ ಕಮಿಟಿಗಳು ಕಾರ್ಯನಿರ್ವಹಿಸಲಿವೆ ಎಂದು ಸಚಿವ ಸುಧಾಕರ್ ಹೇಳಿದರು.

ಹೋಮ್​ ಐಸೋಲೇಷನ್ ಮಾರ್ಗಸೂಚಿಯ ಪ್ರಮುಖಾಂಶಗಳು :

1. ಕೇವಲ ಲಕ್ಷಣರಹಿತ ಮತ್ತು ಬೇರೆ ರೋಗ ಲಕ್ಷಣ ಇರದ ಹಾಗೂ ಕೋವಿಡ್ ದೃಢಪಟ್ಟಿರುವ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಮ್​ ಐಸೋಲೇಶನ್ ಮಾಡಬಹುದು.
2. ಹೋಮ್​ ಐಸೋಲೆಷನ್​ನಲ್ಲಿ ಇರುವವರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸುವುದು.
3. ಆರೋಗ್ಯಾಧಿಕಾರಿಗಳು ಮನೆಗೆ ಭೇಟಿ ನೀಡಿ ಹೋಮ್​ ಐಸೋಲೇಷನ್ ಮಾಡಲು ಸೂಕ್ತವಾಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳುವುದು.
4. ಸಂಬಂಧಪಟ್ಟ ಆರೋಗ್ಯಾಧಿಕಾರಿಗಳಲ್ಲಿ ಹೋಮ್​ ಐಸೋಲೇಷನ್​ನಲ್ಲಿರುವವರು ಪ್ರತಿನಿತ್ಯ ತಪಾಸಣೆ ಮಾಡಿಸಿಕೊಳ್ಳುವುದು.
5. ಹೋಮ್​ ಐಸೋಲೇಷನ್​ನಲ್ಲಿರುವ ವ್ಯಕ್ತಿಯ ಹತ್ತಿರ ಪಲ್ಸ್ ಆಕ್ಸಿಮೀಟರ್, ಡಿಜಿಟಲ್ ಥರ್ಮಾಮೀಟರ್, ಪಿಪಿಇ ಸೇರಿದಂತೆ ಅಗತ್ಯ ಸಲಕರಣೆಗಳು ಲಭ್ಯವಿರುವುದು.
6. ಹೋಮ್​ ಐಸೋಲೇಷನ್​ನಿಂದ ಬಿಡುಗಡೆ ಹೊಂದಲು ಪ್ರಸ್ತುತದಲ್ಲಿರುವ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಪ್ರೋಟೋಕಾಲ್​ಗಳನ್ನೇ ಅನ್ವಯಿಸುವುದು.
7. ಹೋಮ್​ ಐಸೋಲೇಷನ್ ಕುರಿತಂತೆ ಕುಟುಂಬದ ಸದಸ್ಯರಿಗೆ, ನೆರೆಹೊರೆಯವರಿಗೆ ಹಾಗೂ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಿರುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.