ETV Bharat / state

ತೆರಿಗೆ ಕಾನೂನು ಸರಳವಾದಷ್ಟು ಸಾಮಾನ್ಯ ಜನರಿಗೆ ಅನುಕೂಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ - ಆರ್ಥಿಕತೆ ಬೆಳವಣಿಗೆಯಲ್ಲಿ ತೆರಿಗೆದಾರರ ಪಾತ್ರ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ತೆರಿಗೆ ಸಲಹೆಗಾರರ ಸಮ್ಮೇಳನವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

Former CM Basavaraj Bommai inaugurated
ರಾಷ್ಟ್ರೀಯ ತೆರಿಗೆ ಸಲಹೆಗಾರರ ಸಮ್ಮೇಳನವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
author img

By

Published : Aug 5, 2023, 8:01 PM IST

ಬೆಂಗಳೂರು: ತೆರಿಗೆ ಕಾನೂನುಗಳು ಸರಳವಾದಷ್ಟು ಸಾಮಾನ್ಯರಿಗೆ ಅನುಕೂಲವಾಗಲಿದೆ. ಹೆಚ್ಚು ತೆರಿಗೆ ಸಂಗ್ರಹವಾದರೆ, ದೇಶ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಚಿತ ಯೋಜನೆಗಳಿಂದ ಹೆಚ್ಚು ಹಣ ವೆಚ್ಚ: ಅರಮನೆ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ತೆರಿಗೆ ಸಲಹೆಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ಆರ್ಥಿಕ ಬೆಳವಣಿಗೆ ಹೊಂದಲು ಬಯಸುತ್ತಾನೆ. ನಾನು ಹಣಕಾಸು ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ನಾನು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮನಸ್ಸು ಮಾಡಿದರೆ ಯಾವುದು ಕಷ್ಟವಲ್ಲ ಎಂದು ಯೋಚಿಸಿ ಕಾರ್ಯ ಪ್ರವೃತ್ತನಾದೆ. ಮೂರು ತಿಂಗಳಲ್ಲಿ ಶೇ 70 ರಷ್ಟು ಆದಾಯ ಹೆಚ್ಚಳ ಮಾಡಿದೆ. ರಾಜ್ಯದ ಆದಾಯ ಹೆಚ್ಚಿಸಿ ಎರಡು ವರ್ಷದ ಅವಧಿಯಲ್ಲಿ ಹೆಚ್ಚುವರಿ ಬಜೆಟ್ ಮಂಡನೆ ಮಾಡಿದೆ. ಈಗಿನ ಸರ್ಕಾರ ಉಚಿತ ಯೋಜನೆಗಳಿಗೆ ಹೆಚ್ಚಿನ ಹಣ ವೆಚ್ಚ ಮಾಡುತ್ತಿದ್ದು, ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಆರ್ಥಿಕತೆ ಬೆಳವಣಿಗೆಯಲ್ಲಿ ತೆರಿಗೆದಾರರ ಪಾತ್ರ ಮಹತ್ವದ್ದಾಗಿದೆ. ಆರ್ಥಿಕತೆ ಯಾವುದೇ ಒತ್ತಡವಿಲ್ಲದೇ ಬೆಳೆಯುವಂತಾಗಬೇಕು. ಆದಾಗ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರ ಐದು ಟ್ರಿಲಿಯನ್ ಡಾಲರ್ ಗುರಿ ಮುಟ್ಟುವ‌ ಕನಸು ಸಾಧ್ಯವಾಗಲಿದೆ. ಆರಂಭದ ದಿನಗಳಲ್ಲಿ ಬಹುತೇಕರು ಜಿಎಸ್​​ಟಿ ವಿರೋಧಿಸಿದ್ದರು. ಆದರೆ ಈಗ ಎಲ್ಲರೂ ಒಪ್ಪಿಕೊಂಡಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ‌ ಎಂದು ಹೇಳಿದರು.

ದೊಡ್ಡ ಉದ್ದಿಮೆದಾರರಿಂದ ತೆರಿಗೆ ಸಂಗ್ರಹಿಸುವುದು ಚಾಲೆಂಜ್: ಒಂದು ದೇಶದ ಜಿಡಿಪಿಯನ್ನು ಅಳೆಯುವುದು ಹೇಗೆ ಎನ್ನುವುದು ಪ್ರಶ್ನೆ, ಆರ್ಥಿಕ ತಜ್ಞರು ಜಿಡಿಪಿಯನ್ನು ಕ್ಲಿಷ್ಟಮಯಗೊಳಿಸುತ್ತಾರೆ‌. ಕೆಲವರಿಗೆ ಕಾನೂನಿನ ಅರಿವಿಲ್ಲದೇ ತೆರಿಗೆ ಕಟ್ಟದೇ ಉಳಿಯುತ್ತಾರೆ.‌ ಕೆಲವರಿಗೆ ಕಾನೂನಿನ ಮಾಹಿತಿ ಇದ್ದರೂ ಅದರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಸಣ್ಣವರು ಹೆಚ್ಚು ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಾರೆ. ಅವರಿಗೆ ಒಂದು ಸಾವಿರ ರೂಪಾಯಿ ಹೆಚ್ಚಿಗೆ ತೆರಿಗೆ ಕಟ್ಟಬೇಕೆಂದರೂ ಕಟ್ಟುತ್ತಾರೆ. ಆದರೆ ದೊಡ್ಡ ಉದ್ದಿಮೆದಾರರಿಂದ ಒಂದು ಕೋಟಿ ರೂ. ತೆರಿಗೆ ಹೆಚ್ಚಾಗಿದೆ ಅಂದರೆ ಆಗ ಅವರಿಂದ ತೆರಿಗೆ ಸಂಗ್ರಹಿಸುವುದು ಚಾಲೆಂಜ್ ಎದುರಾಗುತ್ತದೆ ಎಂದು ಹೇಳಿದರು.

ಆಡಳಿತ ನಡೆಸುವವರು ಕಾನೂನು ಜಾರಿ ಮಾಡುತ್ತೇವೆ. ಅದನ್ನು ಅರ್ಥ ಮಾಡಿಕೊಂಡು ಜಾರಿಗೆ ತರುವ ಕೆಲಸವನ್ನು ತೆರಿಗೆ ಸಲಹೆಗಾರರು ಮಾಡುತ್ತಿದ್ದಾರೆ. ತೆರಿಗೆ ಸಲಹೆಗಾರರು ಸರ್ಕಾರದ ಭಾಗವಾಗಿದ್ದು, ವ್ಯಾಪಾರಿ ಸಮುದಾಯದ ಭಾಗವಾಗಿಯೂ ಕೆಲಸ ಮಾಡುತ್ತಿದ್ದು, ದ್ವಿಪಾತ್ರ ನಿಭಾಯಿಸುತ್ತಿದ್ದಾರೆ. ವ್ಯಾಪಾರ ಮತ್ತು ತತ್ವಜ್ಞಾನದಲ್ಲಿ ಲಾಭ ನಷ್ಟದ ಲೆಕ್ಕ ತದ್ವಿರುದ್ಧವಾಗಿದ್ದು, ವ್ಯಾಪಾರದಲ್ಲಿ ಪಾಪ ಪುಣ್ಯ, ತತ್ವಜ್ಞಾನದಲ್ಲಿ ಲಾಭ ನಷ್ಟದ ಲೆಕ್ಕ ಹಾಕಬೇಕು ಎಂದು ಸಲಹೆ ನೀಡಿದರು.

ಸಾಮಾನ್ಯ ಜನರು ದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನಾವು ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಿದರೆ, ಆ ಹಣವನ್ನು ರಸ್ತೆ ಟಾರ್ ಹಾಕುವವರು, ಟಾರ್ ಹಾಕದೇ ಇದ್ದರೆ ಹೇಗೆ ಅಭಿವೃದ್ಧಿಯಾಗುತ್ತದೆ. ಕೆಳ ಹಂತದಿಂದಲೇ ಮಾನವ ಸಂಪನ್ಮೂಲ ಅಭಿವೃದ್ಧಿಯಾದರೆ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಮಾಜಿ ಡಿಸಿಎಂ ಡಾ. ಅಶ್ವತ್ಥನಾರಾಯಣ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.