ETV Bharat / state

ಏರ್​​​ಪೋರ್ಟ್ ಮುಂಭಾಗ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ - Bangalore airport

ಬಾಡಿಗೆ ಸಿಗದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಕಾರು ಚಾಲಕನೊಬ್ಬ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಆತನ ದೇಹದ ಶೇ.20ರಷ್ಟು ಭಾಗ ಸುಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

a-taxi-driver-attempting-to-commit-suicide-by-pouring-petrol-at-the-airport
ಏರ್​​​ಪೋರ್ಟ್ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ
author img

By

Published : Mar 30, 2021, 8:00 PM IST

ದೇವನಹಳ್ಳಿ (ಬೆಂ.ಗ್ರಾ): ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದ ಮುಂಭಾಗ ಟ್ಯಾಕ್ಸಿ ಚಾಲಕನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಜೆ 4:45ರ ಸುಮಾರಿಗೆ ನಡೆದಿದೆ.

ಏರ್​​​ಪೋರ್ಟ್ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ

ಆತ್ಮಹತ್ಯೆಗೆ ಯತ್ನಿಸಿದವನನ್ನು ಮಂಡ್ಯ ಮೂಲದ ಪ್ರತಾಪ್ (26) ಎಂದು ಗುರುತಿಸಲಾಗಿದೆ. ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಈತನಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಎಂಬ ಮಾಹಿತಿ ದೊರೆತಿದೆ.

ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣ ಪೊಲೀಸರು ಏರ್​ಪೋರ್ಟ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಿಂದ ಅಕ್ರೋಶಗೊಂಡ ಟ್ಯಾಕ್ಸಿ ಚಾಲಕರು ಏರ್​​ಪೋರ್ಟ್ ಬಳಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ರಾಜ್ಯದಲ್ಲಿಂದು 2975 ಹೊಸ ಕೋವಿಡ್ ಪ್ರಕರಣ: ಮಹಾಮಾರಿಗೆ 21 ಮಂದಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.