ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಆರೋಗ್ಯ ವಿಮೆ ನೀಡುವಂತೆ ಹಾಗೂ ಮಲತಾಯಿ ಧೋರಣೆ ನಿಲ್ಲಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆ ಮುಂದೆ ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೋರಂನ ಸದಸ್ಯರು ಪ್ರತಿಭಟಿಸಿದರು.
ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸುಮಾರು 6 ತಿಂಗಳಿನಿಂದ ಶಿಕ್ಷಣ ಸಂಸ್ಥೆಗಳು ತತ್ತರಿಸಿ ಹೋಗಿವೆ. ವೇತನವಿಲ್ಲದ ಕಾರಣ, ಸುಮಾರು 4.50 ಲಕ್ಷ ಅನುದಾನ ರಹಿತ ಶಾಲಾ ಶಿಕ್ಷಕರು ಜೀವನ ನಡೆಸಲು ಕಷ್ಟಕರ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮತ್ತು ಅತಿಥಿ ಉಪನ್ಯಾಸಕರಿಗೆ ಸವಲತ್ತು ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಸಚಿವ ಸುರೇಶ್ ಕುಮಾರ್ ಪ್ರತಿಭಟನಾಕಾರರನ್ನ ಭೇಟಿ ಮಾಡಿ, ಅವರೊಂದಿಗೆ ಚರ್ಚಿಸಿ, ಕೂಡಲೇ ಶಿಕ್ಷಣ ಇಲಾಖೆ ತೆಗೆದುಕೊಳ್ಳಬಹುದಾದ ಕೆಲ ಕ್ರಮಗಳ ಕುರಿತು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.