ETV Bharat / state

ಬದಲಾವಣೆಗೆ ತಕ್ಕಂತೆ ಗುಣಮಟ್ಟದ ವಿದ್ಯಾಭ್ಯಾಸ ಅವಶ್ಯಕ: ಸಂಸದ ಬಿ.ಎನ್.ಬಚ್ಚೇಗೌಡ - MP B N Bacchegowda

ಶಿಕ್ಷಕರ ದಿನಾಚರನೆಯ ಪ್ರಯುಕ್ತ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನ ಮತ್ತು ಜಿಲ್ಲೆಯ 4 ಶಿಕ್ಷಕರು ತಮ್ಮ ಶಿಕ್ಷಕ ವೃತ್ತಿಯ ವೇಳೆ ನಿಧನ ಹೊಂದಿದ ಕಾರಣ ಅವರ ಪರವಾಗಿ ಕುಟುಂಬಸ್ಥರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಶಿಕ್ಷಕರ ದಿನಾಚರಣೆ
author img

By

Published : Sep 6, 2019, 8:04 AM IST

ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರಸ್ತುತ ಕಾಲಘಟ್ಟದಲ್ಲಿ ಬದಲಾವಣೆಗೆ ತಕ್ಕಂತೆ ಗುಣಮಟ್ಟವಾದ ಕ್ರಮಬದ್ಧ ವಿದ್ಯಾಭ್ಯಾಸ ನೀಡಬೇಕು ಎಂದು ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ದೇವನಹಳ್ಳಿಯಲ್ಲಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ 132 ನೇ ಜನ್ಮದಿನಾಚರಣೆ ಮತ್ತು ಜಿಲ್ಲಾ ಹಾಗೂ ದೇವನಹಳ್ಳಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಯೋಜನೆಗಳನ್ನು ಕೈಗೊಂಡ ಫಲವಾಗಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಫಲಿತಾಂಶವು ಶೇ. 82 ರಿಂದ 88.35% ಕ್ಕೆ ಹೆಚ್ಚಳಗೊಂಡು ರಾಜ್ಯದಲ್ಲಿ ಜಿಲ್ಲಾಸ್ಥಾನ 14 ರಿಂದ 3 ನೇ ಸ್ಥಾನಕ್ಕೆ ಏರಿಕೆಯಾಗಿರುವುದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರು ಮಾದರಿ ಶಿಕ್ಷಕರಾಗಿ ಅಪಾರ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳ ಹಾಗೇ ಕಂಡು ವಿದ್ಯಾಭ್ಯಾಸ ಕಲಿಸಿ ದೇಶಕ್ಕೆ ಉನ್ನತ ಪ್ರಜೆಗಳನ್ನು ಕೊಡುಗೆಯಾಗಿ ನೀಡಬೇಕು. ಹಾಗೇ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ಯಶಸ್ಸು ಸಾಧಿಸಿದ ಫಲವಾಗಿ ನವದೆಹಲಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸ್ಕೋಚ್ ಅವಾರ್ಡ್ ಲಭಿಸಿರುವುದು ಶಿಕ್ಷಕರ ಪರಿಶ್ರಮಕ್ಕೆ ಸಂದ ಗೌರವ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದ್ರು.

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಇದೇ ವೇಳೆ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು.. ಹಾಗೇ ಜಿಲ್ಲೆಯ 4 ಶಿಕ್ಷಕರು ತಮ್ಮ ಶಿಕ್ಷಕ ವೃತ್ತಿಯ ವೇಳೆ ನಿಧನ ಹೊಂದಿದ ಕಾರಣ ಅವರ ಪರವಾಗಿ ಕುಟುಂಬಸ್ಥರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು..

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಜಯಮ್ಮ, ಉಪಾಧ್ಯಕ್ಷರಾದ ಕನ್ಯಾಕುಮಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಅಜಿತ್‍ಕುಮಾರ್ ರೈ, ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಟಿ. ಮುರುಡಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿದೇವಿ, ತಪಸೀಹಳ್ಳಿಯ ಮಹರ್ಷಿ ಗುರುಕುಲ ಪೀಠದ ಶ್ರೀ ಪುಷ್ಪಾಂಡಜ ದಿವ್ಯಾನಂದ ಸ್ವಾಮೀಜಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

Intro:KN_BNG_03_05_Sarvapalli_Radhakrishna_Ambarish_7203301
Slug: ಬದಲಾವಣೆಗೆ ತಕ್ಕಂತೆ ಗುಣಮಟ್ಟವಾದ
ಕ್ರಮಬದ್ಧ ವಿದ್ಯಾಭ್ಯಾಸ ಅವಶ್ಯಕ: ಸಂಸದ
ಬಿ.ಎನ್.ಬಚ್ಚೇಗೌಡ

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ
ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರಸ್ತುತ ಕಾಲಘಟ್ಟದಲ್ಲಿ
ಬದಲಾವಣೆಗೆ ತಕ್ಕಂತೆ ಗುಣಮಟ್ಟವಾದ ಕ್ರಮಬದ್ಧ
ವಿದ್ಯಾಭ್ಯಾಸ ನೀಡಬೇಕು ಎಂದು ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು
ಜಿಲ್ಲಾ ಪಂಚಾಯತಿ ವತಿಯಿಂದ ದೇವನಹಳ್ಳಿ ಪಟ್ಟಣದ
ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಭಾರತರತ್ನ
ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ 132 ನೇ ಜನ್ಮ
ದಿನಾಚರಣೆ ಮತ್ತು ಜಿಲ್ಲಾ ಹಾಗೂ ದೇವನಹಳ್ಳಿ
ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ
ಯೋಜನೆಗಳನ್ನು ಕೈಗೊಂಡ ಫಲವಾಗಿ ಜಿಲ್ಲೆಯ
ಎಸ್‍ಎಸ್‍ಎಲ್‍ಸಿ ಫಲಿತಾಂಶವು ಶೇ. 82 ರಿಂದ 88.35% ಕ್ಕೆ ಹೆಚ್ಚಳಗೊಂಡು ರಾಜ್ಯದಲ್ಲಿ ಜಿಲ್ಲಾಸ್ಥಾನ 14 ರಿಂದ 3 ನೇ ಸ್ಥಾನಕ್ಕೆ ಏರಿಕೆಯಾಗಿರುವುದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅವರ ಪಾತ್ರದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ರು..

ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರು ಮಾದರಿ ಶಿಕ್ಷಕರಾಗಿ ಅಪಾರ ಕೊಡುಗೆ ನೀಡಿದ್ದಾರೆ. ಗುರುನಿಂದನೆ
ಒಳ್ಳೆಯದಲ್ಲ, ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳ ಹಾಗೇ ಕಂಡು ವಿದ್ಯಾಭ್ಯಾಸ ಕಲಿಸಿ ದೇಶಕ್ಕೆ ಉನ್ನತ ಪ್ರಜೆಗಳನ್ನು ಕೊಡುಗೆಯಾಗಿ ನೀಡಬೇಕು.. ಹಾಗೇ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ಯಶಸ್ಸು ಸಾಧಿಸಿದ ಫಲವಾಗಿ ನವದೆಹಲಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸ್ಕೋಚ್ ಅವಾರ್ಡ್ ಲಭಿಸಿರುವುದು ಶಿಕ್ಷಕರ ಪರಿಶ್ರಮಕ್ಕೆ ಸಂದ ಗೌರವವಾಗಿದೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದ್ರು..

ಕಾರ್ಯಕ್ರಮದಲ್ಲಿ ಬೆಂ. ಗ್ರಾಮಾಂತರ ಜಿಲ್ಕೆಯ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ
ಅಧ್ಯಕ್ಷರಾದ ಜಯಮ್ಮ, ಉಪಾಧ್ಯಕ್ಷರಾದ ಕನ್ಯಾಕುಮಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ
ಉಪನಿರ್ದೇಶಕರಾದ ಕೃಷ್ಣಮೂರ್ತಿ, ದೇವನಹಳ್ಳಿ
ತಾಲ್ಲೂಕಿನ ತಹಶೀಲ್ದಾರ್ ಅಜಿತ್‍ಕುಮಾರ್ ರೈ, ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಟಿ. ಮುರುಡಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿದೇವಿ, ತಪಸೀಹಳ್ಳಿಯ ಮಹರ್ಷಿ ಗುರುಕುಲ ಪೀಠದ ಶ್ರೀ ಪುಷ್ಪಾಂಡಜ ದಿವ್ಯಾನಂದ ಸ್ವಾಮೀಜಿ ಸೇರಿದಂತೆ ಜಿಲ್ಲಾ ಮತ್ತು
ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು
ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ದೇವನಹಳ್ಳಿ ಪಟ್ಟಣದ ವೇಣುಗೋಪಾಲಸ್ವಾಮಿ ದೇವಾಲಯದಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನದವರೆಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಮೆರವಣಿಗೆ ನಡೆಸಿದ್ರು.. ಬಳಿಕ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು.. ಹಾಗೇ ಜಿಲ್ಲೆಯ 4 ಶಿಕ್ಷಕರು ತಮ್ಮ ಶಿಕ್ಷಕ ವೃತ್ತಿಯ ವೇಳೆ ನಿಧನ ಹೊಂದಿದ ಕಾರಣ ಅವರ ಪರವಾಗಿ ಕುಟುಂಬಸ್ಥರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು..

Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.