ETV Bharat / state

ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರೋಧಿಸಿ ಬೃಹತ್ ಪ್ರತಿಭಟನೆ

author img

By

Published : Jan 29, 2020, 12:02 AM IST

ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರೋಧಿಸಿ, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ನಗರದ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ್ದ ಸಾವಿರಾರು ಸರ್ಕಾರಿ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

teachers-protest-in-bangalore
ಪ್ರಾಥಮಿಕ ಶಿಕ್ಷಕರ ಹಿಂಬಡ್ತಿ ವಿರೋಧಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರೋಧಿಸಿ, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಸರ್ಕಾರಿ ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚೆಗೆ ಪ್ರಾಥಮಿಕ ಶಿಕ್ಷಣದಲ್ಲಿ ಎನ್​ಸಿಟಿಇ ನಿಯಮಾವಳಿ ಆಧರಿಸಿ 1 ರಿಂದ 5, 6 ರಿಂದ 8 ತರಗತಿಗಳ ಶಿಕ್ಷಕರನ್ನು ವಿಂಗಡಿಸಿದ್ದು, ವೃಂದ ಬಲ ವರ್ಗೀಕರಿಸಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಿದೆ. ಇದರಿಂದ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರಿದ್ದು, ಎಲ್ಲರಿಗೂ ಎನ್​ಸಿಟಿಇ ನಿಗದಿತ ವಿದ್ಯಾರ್ಹತೆ ಇದೆ. ಆರರಿಂದ ಎಂಟನೇ ತರಗತಿಗೆ ಬೋಧಿಸಬೇಕಾದ ಎಲ್ಲಾ ಅರ್ಹತೆಗಳಿದ್ದರೂ, 1 ರಿಂದ 5 ನೇ ತರಗತಿಗೆ ಹಿಂಬಡ್ತಿ ನೀಡ್ತಿರೋದು ಅನ್ಯಾಯ ಎಂದು ಪ್ರತಿಭಟನೆ ನಡೆಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಹಿಂಬಡ್ತಿ ವಿರೋಧಿಸಿ ಬೃಹತ್ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಬಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ , ಪದವೀಧರ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.