ETV Bharat / state

'ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ'

ತಾರಾಲಯಗಳ ವಿನ್ಯಾಸ ಮತ್ತು ಅವುಗಳ ಉನ್ನತೀಕರಣದ ಬಗ್ಗೆ ಸಚಿವ ಎನ್.ಎಸ್.ಭೋಸರಾಜು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

author img

By ETV Bharat Karnataka Team

Published : Dec 26, 2023, 10:17 PM IST

ಸಚಿವ ಎನ್ ಎಸ್ ಭೋಸರಾಜು
ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ಕಡಿಮೆ ವೆಚ್ಚದಲ್ಲಿ ಉಪ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಏಕರೂಪದ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿಯನ್ನು ರಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಕರ್ನಾಟಕ ವಿಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಅಲ್ಲದೇ, ಇನ್ನು ಕೆಲವು ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಅನುಮತಿಯನ್ನು ನೀಡಲಾಗಿದೆ. ಆದರೆ, ಅನುಮತಿ ದೊರಕಿರುವ ಹಲವಾರು ಕೇಂದ್ರಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ಅವುಗಳ ವಿನ್ಯಾಸ ಅಂತಿಮಗೊಳ್ಳದೇ ಇರುವುದು. ಈ ಹಿನ್ನೆಲೆಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಏಕರೂಪ ವಿನ್ಯಾಸವನ್ನು ಅಂತಿಮಗೊಳಿಸುವುದು ಸೂಕ್ತವಾಗಿದೆ. ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಹಾಗೂ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುವಂತಹ ವಿನ್ಯಾಸ ರಚನೆ ಮಾಡುವುದು ಅಗತ್ಯ. ಈ ನಿಟ್ಟಿನಲ್ಲಿ ಏಕರೂಪ ವಿನ್ಯಾಸವನ್ನು ತಯಾರು ಮಾಡಲು ತಾಂತ್ರಿಕ ಸಮಿತಿಯನ್ನು ರಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದರು.

ಅಧಿಕಾರಿಗಳೊಂದಿಗೆ ಸಚಿವ ಎನ್ ಎಸ್ ಭೋಸರಾಜು
ಅಧಿಕಾರಿಗಳೊಂದಿಗೆ ಸಚಿವ ಎನ್ ಎಸ್ ಭೋಸರಾಜು

ಉಪ ಪ್ರಾದೇಶಿಕ ಕೇಂದ್ರಗಳ ನಿರ್ಮಾಣ: ರಾಯಚೂರು ಹಾಗೂ ಯಾದಗಿರಿಯಲ್ಲಿ ರಚಿಸಲು ಉದ್ದೇಶಿಸಲಾಗಿರುವ ಉಪ ವಿಜ್ಞಾನ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿ ತಮ್ಮ ಒಪ್ಪಿಗೆ ಸೂಚಿಸಿದೆ. ಚಿಕ್ಕಮಗಳೂರು ಉಪ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಕೇಂದ್ರ ತಂಡ ಜನವರಿ ತಿಂಗಳಲ್ಲಿ ಭೇಟಿ ನೀಡಲಿದೆ. ಈ ವಿಜ್ಞಾನ ಕೇಂದ್ರಗಳ ನಿರ್ಮಾಣ ಕಾರ್ಯ ರಾಜ್ಯ ಮತ್ತು ಕೇಂದ್ರ ಸರಕಾರದ ಜಂಟಿ ಅನುದಾನದಲ್ಲಿ ನಡೆಯಲಿದ್ದು, ಈ ಬಗ್ಗೆ ಒಡಂಬಡಿಕೆ ಬಾಕಿಯಿದೆ. ಒಡಂಬಡಿಕೆಯ ನಂತರ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಒಡಂಬಡಿಕೆಯ ಬಗ್ಗೆ ಕೇಂದ್ರ ಸರಕಾರದೊಂದಿಗೆ ಸಂವಹನ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಕರ್ನಾಟಕ ರಿಸರ್ಚ್ ಫೌಂಡೇಶನ್ ಸ್ಥಾಪನೆಗೆ ಈಗಾಗಲೇ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2008ರಲ್ಲಿ ಪ್ರಾರಂಭಿಸಲಾಗಿರುವ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹವನ್ನು ಈ ಫೌಂಡೇಶನ್ ಅಡಿಯಲ್ಲಿ ತರಲಾಗುವುದು. ಉನ್ನತಶಿಕ್ಷಣ, ವೈದ್ಯಕೀಯ ಶಿಕ್ಷಣ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ರಿಸರ್ಚ್ ಸೆಲ್ಗಳನ್ನು ರಚಿಸಲಾಗುವುದು. ಈ ಸೆಲ್ಗಳ ಅಡಿಯಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವರು ಹೇಳಿದರು.

ವಿಜ್ಞಾನ ಕೇಂದ್ರಗಳ ಉನ್ನತೀಕರಣ: ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆ, ಚಿಂತನೆ ಮತ್ತು ವೈಚಾರಿಕತೆಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಪ್ರಚುರಪಡಿಸುವ ಪ್ರಮುಖ ಉದ್ದೇಶದಿಂದ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖಗೋಳಶಾಸ್ತ್ರ ಹಾಗೂ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತಶಾಸ್ತ್ರ ಆಧಾರಿತ ಶಿಕ್ಷಣವನ್ನು ಉತ್ತೇಜಿಸಲು ತಾರಾಲಯಗಳ ಸ್ಥಾಪನೆ ಮಾಡಲಾಗಿದೆ. ಕಳೆದ ಆಯವ್ಯಯದಲ್ಲಿ ಘೋಷಿಸಿದ್ದಂತೆ 2 ಕೋಟಿ ರೂ. ವೆಚ್ಚದಲ್ಲಿ 2 ಪ್ರಾದೇಶಿಕ ಹಾಗೂ 4 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರಿನಲ್ಲಿ ತಲಾ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ, ಡಾ. ಎಚ್‌.ಎನ್‌. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕಾರವಾರ ಮತ್ತು ಬೀದರ್‌ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ತಲಾ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಣ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಆಗಾಗ್ಗೆ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವಂತಹ ಹೊಸ ಆವಿಷ್ಕಾರಗಳನ್ನ ಅಳವಡಿಸಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಹಾಗೂ ಆಸಕ್ತಿಯನ್ನು ಹೆಚ್ಚಿಸುವಂತಹ ನೂತನ ಅಂಶಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಚಿವ ಎನ್ ಎಸ್ ಭೋಸರಾಜು
ಅಧಿಕಾರಿಗಳೊಂದಿಗೆ ಸಚಿವ ಎನ್ ಎಸ್ ಭೋಸರಾಜು

ಸಭೆಯಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮಾಲಪಾಟಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಯಚೂರಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಾಣ ಆರೋಪ; ತಾರಾಲಯ ಕಾಮಗಾರಿ ಬಗ್ಗೆ ಸಚಿವ ಬೋಸರಾಜು ಏನಂತಾರೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.