ಬೆಂಗಳೂರು: ಸರ್ಕಾರಿ ಆದೇಶದಂತೆ ನವೆಂಬರ್ 17ರಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ತಾಂತ್ರಿಕ, ಡಿಪ್ಲೊಮಾ, ಅನುದಾನ ರಹಿತ ಕಾಲೇಜುಗಳು ಪ್ರಾರಂಭ ಆಗಲಿವೆ. ಈ ವೇಳೆ ಕೇಂದ್ರ ಸರ್ಕಾರದ ಯೂನಿವರ್ಸಿಟಿ ಗ್ರ್ಯಾಂಟ್ ಕಮಿಷನ್ ನೀಡಿರುವ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕೆಂದು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ.
ಅನುಸರಿಸಬೇಕಾದ ಕ್ರಮಗಳು
1. ಸಂಸ್ಥೆಯಲ್ಲಿ ಉಪಯೋಗಿಸುವ ಎಲ್ಲಾ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವುದು.
2. ಎಲ್ಲಾ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರ ಉಪಯೋಗಕ್ಕೆ ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದು.
3. ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಬಳಸುವುದು.
ಈ ಖರ್ಚು ವೆಚ್ಚಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ಗಳ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾಂಶುಪಾಲರ ಪಿಡಿ ಖಾತೆಯ ಅನುದಾನವನ್ನು ಕೆಟಿಪಿಪಿ ನಿಯಮದಂತೆ ಉಪಯೋಗಿಸಲು ಆದೇಶಿಸಲಾಗಿದೆ. ಜೊತೆಗೆ ಈ ಬಗ್ಗೆ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೂ ಮೊದಲು ಅನುಸರಿಸಬೇಕಾದ ಕೋವಿಡ್ ಮಾರ್ಗಸೂಚಿ ಕುರಿತು ಆದೇಶ ಹೊರಡಿಸಲಾಗಿದೆ.