ETV Bharat / state

ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ಟೆಂಡರ್: ಪ್ರಗತಿ ವರದಿ ಕೇಳಿದ ಹೈಕೋರ್ಟ್ - Bangalore

ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬ್ಯುಲೆನ್ಸ್ ನಿರ್ವಹಣಾ ವ್ಯವಸ್ಥೆ ಟೆಂಡರ್ ಯಾವ ಹಂತದಲ್ಲಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

technology-based-ambulance-tender-high-court-asking-progress-report
ಹೈಕೋರ್ಟ್
author img

By

Published : Oct 19, 2020, 9:09 PM IST

Updated : Oct 19, 2020, 10:30 PM IST

ಬೆಂಗಳೂರು: ಸಂಚಾರ ದಟ್ಟಣೆ ಮಧ್ಯೆಯೂ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಕರೆದಿರುವ ‘ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆಂಬ್ಯುಲೆನ್ಸ್ ನಿರ್ವಹಣಾ ವ್ಯವಸ್ಥೆ’ ಟೆಂಡರ್ ಯಾವ ಹಂತದಲ್ಲಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಕುರಿತು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ ಜಾರಿಗೆ ಕೆಟಿಪಿಪಿ ಕಾಯ್ದೆ ಅನ್ವಯ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರು, ಸರ್ಕಾರದ ಟೆಂಡರ್ ವೇಳಾಪಟ್ಟಿಯಲ್ಲಿ ದಿನಾಂಕಗಳನ್ನಷ್ಟೇ ನಮೂದಿಸಲಾಗಿದೆ. ಟೆಂಡರ್‌ಗೆ ಸಂಬಂಧಿಸಿದ ಅಥವಾ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ ಹೇಗಿರುತ್ತದೆ ಎಂಬುದರ ವಿವರವಿಲ್ಲ. ಯೋಜನೆ ಇನ್ನಷ್ಟು ವಿಳಂಬವಾಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣವನ್ನು ನ್ಯಾಯಾಲಯ ಮೇಲ್ವಿಚಾರಣೆ ನಡೆಸುತ್ತಿದೆ. ಹೀಗಾಗಿ, ಸರ್ಕಾರ ಟೆಂಡರ್ ಸಂಬಂಧ ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಿತು.

Last Updated : Oct 19, 2020, 10:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.