ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕ ನಂತರ ಸಂಕಷ್ಟವೊಂದು ಎದುರಾಗಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ತೇಜಸ್ವಿ ಸೂರ್ಯ ಅವರು ಮಹಿಳೆ ಜೊತೆ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ಕಾಮೆಂಟ್ ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ಕೆಪಿಸಿಸಿ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು. ತೇಜಸ್ವಿ ಸೂರ್ಯ ಅವರಿಂದ ಅನ್ಯಾಯವಾಗಿದೆ. ಆದ್ದರಿಂದ ಕ್ರಮ ಜರುಗಿಸಬೇಕೆಂದು ಆಗ್ರಹಿಸಿತ್ತು. ಅಂತೆಯೇ ಸದ್ಯ ಮಹಿಳಾ ಆಯೋಗ ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಕಳೆದ ಶುಕ್ರವಾರ ದೂರು ಬಂದಿದ್ದು, ದೂರಿನ ಪರಾಮರ್ಶೆ ನಡೆಸಿ ಮಹಿಳಾ ಆಯೋಗ ಇಂದು ನೋಟಿಸ್ ನೀಡಿದೆ. ಬುಧವಾರ 12 ಗಂಟೆಗೆ ತೇಜಸ್ವಿ ಖುದ್ದು ವಿಚಾರಣೆಗೆ ಹಾಜರಾಗಬೇಕು. ದೂರಿನ ಬಗ್ಗೆ ಹೇಳಿಕೆ ನೀಡಬೇಕಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀಭಾಯಿ ಸ್ಪಷ್ಟಪಡಿಸಿದ್ದಾರೆ.