ETV Bharat / state

ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಕೆಸಿಆರ್-ಹೆಚ್​ಡಿಡಿ ಭೇಟಿ - ತೆಲಂಗಾಣ ಸಿಎಂ ಚಂದ್ರಶೇಖರರಾವ್ ಮತ್ತು ದೇವೇಗೌಡ ಭೇಟಿ

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿರುವ ತೆಲಂಗಾಣ ಸಿಎಂ ಕೆಸಿಆರ್, ಪ್ರಸಕ್ತ ರಾಜಕಾರಣ, ರಾಷ್ಟ್ರಪತಿ ಚುನಾವಣೆ ಹಾಗೂ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Telangana CM K Chandrasekhar Rao Visits Ex PM HD Deve Gowda's House
ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರರಾವ್ ಅವರನ್ನು ಬರಮಾಡಿಕೊಂಡ ಮಾಜಿ ಸಿಎಂ
author img

By

Published : May 26, 2022, 2:10 PM IST

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಅವರು ಇಂದು ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿರುವುದು ದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ನಿಗದಿತ ಸಮಯಕ್ಕಿಂತ ತೆಲಂಗಾಣ ಸಿಎಂ ಚಂದ್ರಶೇಖರರಾವ್ ಒಂದು ಗಂಟೆ ತಡವಾಗಿ ಆಗಮಿಸಿದರು. ಮನೆಯಿಂದ ಹೊರಬಂದ ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹೂ ಗುಚ್ಛ ನೀಡಿ ಸಿಎಂ ಚಂದ್ರಶೇಖರ ರಾವ್ ಅವರನ್ನು ಸ್ವಾಗತಿಸಿದರು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಂಬಂಧ ಚಂದ್ರಶೇಖರರಾವ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Telangana CM K Chandrasekhar Rao Visits Ex PM HD Deve Gowda's House
ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರರಾವ್ ಅವರನ್ನು ಬರಮಾಡಿಕೊಂಡ ಮಾಜಿ ಸಿಎಂ

ಭೇಟಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್​ಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಮಾತುಕತೆ ಸೇರಿದಂತೆ ಪ್ರಸಕ್ತ ರಾಜಕಾರಣ, ರಾಷ್ಟ್ರಪತಿ ಚುನಾವಣೆ ಹಾಗೂ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.