ಬೆಂಗಳೂರು: ರಾಜ್ಯದಲ್ಲಿ ಐಸಿಯು ಬೆಡ್ ಗಳ ಕೊರತೆ ಹೆಚ್ಚಾಗುತ್ತಿದ್ದು, ಇವುಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಸರ್ಕಸ್ ನಡೆಸುತ್ತಿದೆ. ಈ ನಡುವೆ ಕೆಲ ಸಂಸ್ಥೆಗಳು ಸರ್ಕಾರದ ನೆರವಿಗೆ ಬರುತ್ತಿದ್ದು, ಅದರಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ ಕೂಡ ಒಂದಾಗಿದೆ.
ಕೋವಿಡ್-19 ಸೋಂಕಿತರ ಚಿಕಿತ್ಸೆಗೆ 86 ಐ.ಸಿ.ಯು ಬೆಡ್ಗಳನ್ನು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ ಒದಗಿಸಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಈ ಕುರಿತು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ರಾಜೀವ್ ಖುಷು, ಗೌರವ್ ಜಬುಲಿ, ಸೇತುಲ್ ಥಕ್ರಾರ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹಾಗೂ ಐ.ಸಿ.ಯು ಆಸ್ಪತ್ರೆಗಳ ನಿರ್ಮಾಣಕ್ಕೆ ನೋಡಲ್ ಅಧಿಕಾರಿಯಾಗಿರುವ ಡಾ. ಪಿ.ಎಸ್.ಹರ್ಷ ಉಪಸ್ಥಿತರಿದ್ದರು.
ಓದಿ :ಕರ್ನಾಟಕದಲ್ಲಿ ಕೊರೊನಾ ಸಾವಿನ "ಮನೆ": ಆಸ್ಪತ್ರೆಗೆ ಬರುವ ಮುನ್ನವೇ ಹಾರಿ ಹೋಗುತ್ತಿದೆ ಪ್ರಾಣಪಕ್ಷಿ!