ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಸಂಜೆ 5.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ವಿವಾದದ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಮಾಲೋಚನೆ ನಡೆಸುವರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಇತ್ತೀಚೆಗಷ್ಟೇ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಕೆಲವು ಸಂಘಟನೆಗಳು ಬೃಹತ್ ರ್ಯಾಲಿ ನಡೆಸಿ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದವು. ಇನ್ನೊಂದೆಡೆ, ಸಿಎಂಗೆ ಪತ್ರ ಬರೆದಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿವಾದ ಪರಿಹಾರಕ್ಕೆ ಸಲಹೆ ನೀಡಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸಭೆ ನಡೆಯುತ್ತಿದೆ.
ಇದನ್ನೂ ಓದಿ: ಮೋದಿ ಬಂದ ಮೇಲೆ ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ವಾ? : ಜಮೀರ್ ಕಿಡಿ