ETV Bharat / state

ರಾಜ್ಯದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಸಿಎಂ ಮನವಿ - ETv Bharata kannada news

ಮಿತ್ರಾ ಯೋಜನೆಯಡಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮನವಿ ಮಾಡಿದರು.

Grant for establishment of textile park in state CM appeals to Centre
ರಾಜ್ಯದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ: ಕೇಂದ್ರಕ್ಕೆ ಸಿಎಂ ಮನವಿ
author img

By

Published : Nov 30, 2022, 8:19 AM IST

ನವದೆಹಲಿ/ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ. ಮಿತ್ರಾ ಯೋಜನೆಯಡಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾದ ಸಿಎಂ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಕರ್ನಾಟಕದ ಕಲಬುರಗಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಮಿತ್ರಾ ಯೋಜನೆಯಡಿ ಸಹಾಯಾನುದಾನ ಪಡೆದು ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿದ್ದು, ಎಲ್ಲಾ ಪ್ರಮುಖ ನಗರಗಳಿಗೆ ಹಾಗೂ ಬಂದರುಗಳಿಗೆ ಕೂಡ ಸಂಪರ್ಕವಿದೆ. ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದ್ದು, ಪ್ರಧಾನಮಂತ್ರಿಗಳ ಕನಸಿನಂತೆ ಜವಳಿ ಕೇತ್ರದಲ್ಲಿ ದೇಶ ಆತ್ಮನಿರ್ಭರ್ ಆಗಲು ಕೂಡ ಸಹಕಾರಿಯಾಗಲಿದೆ ಎಂದರು.

ಇದಲ್ಲದೆ ವಿಜಯಪುರ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಗಳು ಶೈಕ್ಷಣಿಕ ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಹೊಂದಿದ್ದು, ಕೌಶಲ್ಯವುಳ್ಳ ಮಾನವ ಸಂಪನ್ಮೂಲಗಳನ್ನು ಜವಳಿ ಉದ್ಯಮಕ್ಕೆ ಒದಗಿಸಲು ಶಕ್ತವಾಗಿರುವುದರಿಂದ ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿಗಳು ಕೇಂದ್ರ ಜವಳಿ ಖಾತೆ ಸಚಿವರೂ ಆದ ಪಿಯೂಶ್ ಗೋಯಲ್ ಅವರಿಗೆ ಮನವಿ ಮಾಡಿದರು.

ರಾಜ್ಯಕ್ಕೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬಿಡುಗಡೆಗೆ ಸಿಎಂ ಮನವಿ: ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯಕ್ಕೆ ಹತ್ತು ಸಾವಿರ ಮೆಟ್ರಿಕ್ ಟನ್ ಗಳ ಅಕ್ಕಿ ಸರಬರಾಜನ್ನು ಸೀಮಿತಗೊಳಿಸಿರುವ ನೀತಿಯನ್ನು ಮರು ಪರಿಶೀಲಿಸುವಂತೆ ಮನವಿ ಸಲ್ಲಿಸಿದರು. ಭಾರತೀಯ ಆಹಾರ ನಿಗಮದ ವತಿಯಿಂದ ಮಾರ್ಚ್ 23 ರವರೆಗೆ ತೆರೆದ ಮಾರುಕಟ್ಟೆ ಮಾರಾಟ ಯೋಜನೆಯಡಿ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಬಿಡುಗಡೆ ಮಾಡುವಂತೆ ಹಾಗೂ ತಕ್ಷಣವೇ 50 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಬಿಡುಗಡೆ ಮಾಡುವಂತೆಯೂ ಮುಖ್ಯಮಂತ್ರಿಗಳು ಕೋರಿದರು.

ಈ ವೇಳೆ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ಭೂಮಿ ರಾಜ್ಯಕ್ಕೆ ಹಸ್ತಾಂತರಿಸಿ: ರಾಜನಾಥ್ ಸಿಂಗ್​ಗೆ ಸಿಎಂ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.