ETV Bharat / state

ಬಾರ್​ನಲ್ಲಿ ಕುಳಿತು ಭವಿಷ್ಯ ಹೇಳ್ತೀನಿ ಎಂದ ಸ್ನೇಹಿತನ ಕೊಲೆ.. ಆರೋಪಿ ಅರೆಸ್ಟ್​ - friend murder case in bengaluru

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಹತ್ಯೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ಪ್ರಕರಣ
ಕೊಲೆ ಪ್ರಕರಣ
author img

By

Published : Mar 25, 2023, 12:25 PM IST

ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನಿಗೆ ಕಲ್ಲಿನಲ್ಲಿ ಹೊಡೆದು ಹತ್ಯೆಗೈದಿದ್ದ ಆರೋಪಿಯನ್ನ ಗೋವಿಂದರಾಜನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯಾಹ್ನ ನರೇಶ್ ಎಂಬಾತನ ತಲೆಗೆ ಕಲ್ಲಿನಿಂದ ಹೊಡೆದು ಪರಾರಿಯಾಗಿದ್ದ ಮಾರಿಮುತ್ತು ಎಂಬಾತನನ್ನು ಬಂಧಿಸಲಾಗಿದೆ. ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್​ನಲ್ಲಿ ಕುಡಿಯಲು ಬಂದಿದ್ದ ನರೇಶ್ ಹಾಗೂ‌ ಮಾರಿಮುತ್ತು ನಡುವೆ ಗಲಾಟೆಯಾಗಿತ್ತು. ನೋಡ-ನೋಡುತ್ತಿದ್ದಂತೆ ಗಲಾಟೆ ಹೆಚ್ಚಾಗಿ ಫುಟ್ ಪಾತ್ ಮೇಲಿದ್ದ ಕಲ್ಲನ್ನು ನರೇಶ್ ತಲೆಗೆ ಹೊಡೆದು ಮಾರಿಮುತ್ತು ಎಸ್ಕೇಪ್ ಆಗಿದ್ದರು. ಪೆಟ್ಟು ಹೆಚ್ಚಾಗಿದ್ದರಿಂದ ರಕ್ತಸ್ರಾವ ಉಂಟಾಗಿ ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಇದನ್ನೂ ಓದಿ: ಕುಡಿದ ನಶೆಯಲ್ಲಿ ಗಲಾಟೆ: ಸ್ನೇಹಿತರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ

ಕೃತ್ಯಕ್ಕೆ ಕಾರಣವೇನು: ಆರೋಪಿ ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದ ವಿಚಿತ್ರ ಮನಸ್ಥಿತಿಯವನಾಗಿದ್ದ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಒಂದು ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ. ನಿನ್ನೆ ಮಧ್ಯಾಹ್ನ ಮಾರಿಮುತ್ತು ಜೊತೆ ಬಾರಿಗೆ ಹೋಗಿದ್ದ ನರೇಶ್, ನಿನ್ನ ಭವಿಷ್ಯ ಹೇಳ್ತೀನಿ ಎಂದು ಆತನ ಬಳಿ 'ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ' ಎಂದು ಆತನನ್ನ ರೇಗಿಸಲಾರಂಭಿಸಿದ್ದ. ಸಿಟ್ಟಿಗೆದ್ದ ಮಾರಿಮುತ್ತು ಬಾರ್ ಒಳಗಡೆಯಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದಿದ್ದ ಮಾರಿಮುತ್ತು ಪರಾರಿಯಾಗಿದ್ದ. ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ. ಮೃತನ ಪತ್ನಿ ಮಹಾದೇವಿ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸಟೇಬಲ್ ಅನುಮಾಸ್ಪದವಾಗಿ ಸಾವು

ಶಿವಮೊಗ್ಗ: ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸಟೇಬಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಪೊಣೇಶ್ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಪೊಲೀಸ್ ಕಾನ್ಸಟೇಬಲ್ ಪೊಣೇಶ್ ಅವರು ತೀರ್ಥಹಳ್ಳಿ ತಾಲೂಕಿನ ತೀರ್ಥಹಳ್ಳಿ, ಆಗುಂಬೆ, ಮಾಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕರ್ತವ್ಯದಲ್ಲಿದ್ದಾಗ ಕುಡಿದು ಬರುತ್ತಿದ್ದರು ಎಂದು ಹಲವು ಬಾರಿ ಅಮಾನತುಗೊಂಡಿದ್ದರು. ಅಮಾನತುಗೊಂಡಿದ್ದ ಪೊಣೇಶ್ ತೀರ್ಥಹಳ್ಳಿ ಪಟ್ಟಣದಲ್ಲಿಯೇ ಇರುತ್ತಿದ್ದರು.

ಕಲ್ಲು ಎತ್ತಿ ಹಾಕಿ‌ ಕೊಲೆ ಮಾಡಿರುವ ಶಂಕೆ: ಪೊಣೇಶ್ ತೀರ್ಥಹಳ್ಳಿಯ ತರಕಾರಿ ಮಾರುಕಟ್ಟೆಯಲ್ಲಿ ಮಲಗಿದ್ದ ವೇಳೆ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಣೇಶ್ ಶವದ ಬಳಿ ದೊಡ್ಡ ಗಾತ್ರದ ಕಲ್ಲು ದೊರೆತಿದೆ. ಅಲ್ಲದೆ ಪೊಣೇಶ್ ಮಕಾಡೆ ಮಲಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಿನ್ನೆ ರಾತ್ರಿ ಕುಡಿದು ಜಗಳವಾಗಿದ್ದು, ಈ ಜಗಳದಲ್ಲಿ ಕೊಲೆ‌ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಸಿದ್ದಾಪುರದ ವ್ಯಕ್ತಿ ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.