ETV Bharat / state

ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳ ಉತ್ತೀರ್ಣಗೊಳಿಸುವ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತವರ ಕುಟುಂಬದವರ ಆರೋಗ್ಯ, ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ, ಅವರ ಭವಿಷ್ಯದ ಪ್ರಗತಿ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಆದೇಶ ಮಾಡಿದೆ ಎಂದು ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ..

The application for questioning the students' passing process without examination was dismissed
ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳ ಉತ್ತೀರ್ಣಗೊಳಿಸುವ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
author img

By

Published : Sep 14, 2020, 3:50 PM IST

ಬೆಂಗಳೂರು : ಕೋವಿಡ್-19 ಹಿನ್ನೆಲೆ 2019-20ರ ಶೈಕ್ಷಣಿಕ ಸಾಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್​​ಗಳ ಮಧ್ಯಂತರ ಸೆಮಿಸ್ಟರ್​​​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲು ಹೊರಡಿಸಿರುವ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ 2020ರ ಜುಲೈ 10ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ನಗರದ ಎಸ್ ಪಿ ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಹೈಕೋರ್ಟ್​​ ತನ್ನ ತೀರ್ಪಿನಲ್ಲಿ, ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಹೊರಡಿಸಿದ ಮಾರ್ಗಸೂಚಿ ಆಧರಿಸಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಮಧ್ಯಂತರ ಸೆಮಿಸ್ಟರ್​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಮತ್ತು ಹಿಂದಿನ ಸೆಮಿಸ್ಟರ್ ಅಂಕಗಳ (50:50) ಆಧಾರದ ಮೇಲೆ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತವರ ಕುಟುಂಬದವರ ಆರೋಗ್ಯ, ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ, ಅವರ ಭವಿಷ್ಯದ ಪ್ರಗತಿ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಆದೇಶ ಮಾಡಿದೆ ಎಂದು ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಇಂತಹ ನಿರ್ಧಾರ ತೆಗೆದುಕೊಳ್ಳಲು, ವಿವಿಗಳಿಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಲು ರಾಜ್ಯ ಸರ್ಕಾರ ಅಧಿಕಾರ ಹೊಂದಿದೆ. ಕೋವಿಡ್-19 ನಂತಹ ಅಸಾಧಾರಣ ಸನ್ನಿವೇಶದಲ್ಲಿ ಸರ್ಕಾರ ಕೈಗೊಂಡ ನಿರ್ಣಯದಲ್ಲಿ ತಪ್ಪು ಹುಡುಕಲು ಸಾಧ್ಯವಿಲ್ಲ. ಮೇಲಾಗಿ ಈ ವ್ಯವಸ್ಥೆ ಈ ವರ್ಷ ಮತ್ತು ಸೆಮಿಸ್ಟರ್​​​​ಗೆ ಮಾತ್ರ ಸೀಮಿತವಾಗಿದೆ.

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸುವ ವಿಚಾರದಲ್ಲಿ ತನ್ನದೇ ಆದ ವಿಧಾನವನ್ನು ಆಳವಡಿಸಿಕೊಂಡಿವೆ. ಹೀಗಾಗಿ, ಎಲ್ಲಾ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮಧ್ಯೆ ಯಾವುದೇ ತಾರತಮ್ಯಕ್ಕೆ ಅವಕಾಶ ಕಲ್ಪಿಸದೆ ಮತ್ತು ಏಕರೂಪತೆ ಕಾಯ್ದುಕೊಳ್ಳಲು ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.