ETV Bharat / state

ಸುಲಿಗೆಕೋರರ ಬಂಧನ.. 4 ದ್ವಿಚಕ್ರ ವಾಹನ, 40 ಮೊಬೈಲ್ ವಶ - Detention of accused of extortion

ಸುಲಿಗೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

The arrest of accused of extortion by Banaswadi police
ರಾತ್ರಿ ಸಂಚಾರಿಗಳ ಮೇಲೆ ಟಾರ್ಗೆಟ್​ ಮಾಡುತ್ತಿದ್ದ ಆರೋಪಿಗಳ ಬಂಧನ
author img

By

Published : Nov 14, 2020, 5:59 PM IST

ಬೆಂಗಳೂರು: ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಜನರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ನಗರದ ವಿಷ್ಣು, ಶಿವಕುಮಾರ್, ಸಂತಮಿಲ್ ಬಂಧಿತ ಆರೋಪಿಗಳು. ಸುಲಿಗೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ರಾತ್ರಿ ವೇಳೆ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್ ಮಾಡುತ್ತಿದ್ದ ಇವರು, ಚಾಕು ತೋರಿಸಿ ಬೆದರಿಸಿ ಹಣ, ಮೊಬೈಲ್​​ಗಳನ್ನು ಪೀಕುತ್ತಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಣಸವಾಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿಗಳ ಬಂಧನದಿಂದ ಬಾಣಸವಾಡಿ, ರಾಮಮೂರ್ತಿ ನಗರ, ಮಹದೇವಪುರ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸುಲಿಗೆ ಪ್ರಕರಣ ಪತ್ತೆಯಾಗಿವೆ. ಬಂಧಿತರಿಂದ 2.5 ಲಕ್ಷ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳು, 40 ಮೊಬೈಲ್​ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.