ETV Bharat / state

ಒಂಟಿ ಮಹಿಳೆಯರನ್ನು ಗುರಿಯಾಗಿಸಿ ಮೊಬೈಲ್​, ಸರಗಳ್ಳತನ: ಇಬ್ಬರ ಬಂಧನ - two chain robbers arrested

ನಗರದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಗುರಿಯಾಗಿಟ್ಟುಕೊಂಡು ಸರಗಳ್ಳತನ ಮಾಡುತ್ತಿದ್ದರು. ನಿರ್ಜನ ಪ್ರದೇಶದಲ್ಲಿ ಸುತ್ತಾಡುವ ಪುರುಷರನ್ನು ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗುತ್ತಿದ್ದರು.

two chain robbers arrested
ಸರಗಳ್ಳರ ಬಂಧನ
author img

By

Published : Oct 24, 2020, 5:01 AM IST

ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕೂಡ್ಲೂ ಗ್ರಾಮದ ಪ್ರದೀಪ್ ಹಾಗೂ ನಾಗರಾಜ್​ ಬಂಧಿತ ಆರೋಪಿಗಳು. ಇವರಿಂದ ಸುಮಾರು 5.50 ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪನಿಯ 10 ಮೊಬೈಲ್, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ನಗರದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ನಿರ್ಜನ ಪ್ರದೇಶದಲ್ಲಿ ಸುತ್ತಾಡುವ ಪುರುಷರನ್ನು ಹೆದರಿಸಿ ಮೊಬೈಲ್ ಕಿತ್ತುಕೊಂಡು ಹೋಗುತ್ತಿದ್ದರು. ಈ ಕುರಿತು ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರ ಬಂಧನದಿಂದ ಬಂಡೆಪಾಳ್ಯ ಹಾಗೂ ಹುಳಿಮಾವು ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.