ETV Bharat / state

ಈಶ್ವರಪ್ಪ, ಪೂಜಾರಿಗೆ ಡಿಸಿಎಂ ಸ್ಥಾನ ಕೊಡದೆ ಹಿಂದುಳಿದ ವರ್ಗಕ್ಕೆ ಅಪಮಾನ: ಜೆಡಿಎಸ್​ ಆರೋಪ

author img

By

Published : Aug 27, 2019, 6:15 PM IST

ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡದೆ ಬಿಜೆಪಿ ಅವಮಾನಿಸಿದೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ. ಹಿಂದುಳಿದ ಜಾತಿ ಮತ್ತು ವರ್ಗಗಳ ಮತವನ್ನು ಬಾಚಿಕೊಂಡಿರುವ ಬಿಜೆಪಿ ಈ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಎಂದಿದ್ದಾರೆ.

ಜೆಡಿಎಸ್​ ಆರೋಪ

ಬೆಂಗಳೂರು : ಕೇವಲ ಇಬ್ಬರು ಹಿಂದುಳಿದ ವರ್ಗಗಳ ಪ್ರತಿನಿಧಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡು, ಹಿಂದುಳಿದ ವರ್ಗಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದೆ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಮೂರು ಜನ ಉಪ ಮುಖ್ಯಮಂತ್ರಿಗಳಿಗೆ ಜಾತಿವಾರು ಪ್ರಾತಿನಿಧ್ಯ ನೀಡಿರುವ ಬಿಜೆಪಿ ಸರ್ಕಾರ, ಒಂದೇ ಸಮುದಾಯಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸಿರುವುದು ಆಶ್ಚರ್ಯಕರವಾಗಿದೆ. ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಂಪುಟದಲ್ಲಿ ಸೂಕ್ತ ಸ್ಥಾನ ಮಾನ ನೀಡಲು ವಿಫಲವಾಗಿರುವ ಬಿಜೆಪಿ, ಉಪ ಮುಖ್ಯಮಂತ್ರಿಗಳ ನೇಮಕದಲ್ಲೂ ಅವಕಾಶ ನೀಡದೇ ಉದ್ದೇಶಪೂರ್ವಕವಾಗಿ ಈ ಸಮುದಾಯಗಳಿಗೆ ಅವಮಾನ ಮಾಡಿದೆ ಎಂದಿದ್ದಾರೆ.

ramesh-babu
ಜೆಡಿಎಸ್ ವಕ್ತಾರ ರಮೇಶ್ ಬಾಬು

ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಧ್ವನಿ ಎತ್ತಲು ಪ್ರಯತ್ನ ಮಾಡಿದ್ದ ಕೆ.ಎಸ್ ಈಶ್ವರಪ್ಪ ಅವರಿಗಾಗಲಿ ಮತ್ತು ಹಿಂದುಳಿದ ವರ್ಗದ ಕೋಟಾ ಶ್ರೀನಿವಾಸ ಪೂಜಾರಿಗಾಗಲಿ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡಿಲ್ಲ. ಇದರ ಹಿಂದೆ ಹಿಂದುಳಿದ ವರ್ಗಗಳನ್ನು ಅವಮಾನಿಸುವ ಮತ್ತು ಈ ಸಮುದಾಯದ ಸಚಿವರನ್ನು ನಿರ್ಲಕ್ಷ್ಯ ಮಾಡುವ ಉದ್ದೇಶ ಬಿಜೆಪಿಗಿದೆ.

ಕನಿಷ್ಠ ಪಕ್ಷ ತಮಗೆ ಮತ್ತು ತಮ್ಮ ಸಮುದಾಯಕ್ಕೆ ಆಗಿರುವ ಅವಮಾನವನ್ನು ಪ್ರಶ್ನಿಸುವ ಮತ್ತು ಪ್ರತಿಭಟಿಸುವ ನೈತಿಕ ಸ್ಥೈರ್ಯವನ್ನು ಸಚಿವರಾದ ಈಶ್ವರಪ್ಪ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಕಳೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Press Release
ಪತ್ರಿಕಾ ಪ್ರಕಟನೆ

ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ಜಾತಿ ಮತ್ತು ವರ್ಗಗಳ ಮತವನ್ನು ಬಾಚಿಕೊಂಡಿರುವ ಬಿಜೆಪಿ, ಈ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಹಿಂದುಳಿದ ವರ್ಗಗಳ ಲೋಕಸಭಾ ಸದಸ್ಯ ಪಿ.ಸಿ.ಮೋಹನ್​ಗೂ ಯಾವುದೇ ಸ್ಥಾನವನ್ನು ಕೇಂದ್ರದಲ್ಲಿ ನೀಡಿಲ್ಲ. ಬಿಜೆಪಿಯ ಹುನ್ನಾರವನ್ನು ಹಿಂದುಳಿದ ಜಾತಿ ಮತ್ತು ವರ್ಗಗಳು ಅರ್ಥಮಾಡಿಕೊಳ್ಳಬೇಕು. ಬಿಜೆಪಿ ವ್ಯವಸ್ಥಿತವಾಗಿ ರಾಜ್ಯದಲ್ಲಿ ಹಿಂದುಳಿದ ಜಾತಿ ಮತ್ತು ವರ್ಗಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ದೂರಿದ್ದಾರೆ.

Intro:ಬೆಂಗಳೂರು : ಕೇವಲ ಇಬ್ಬರು ಹಿಂದುಳಿದ ವರ್ಗಗಳ ಪ್ರತಿನಿಧಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡು, ಹಿಂದುಳಿದ ವರ್ಗಕ್ಕೆ ಸೂಕ್ತ ಪ್ರಾತಿನಿದ್ಯ ನೀಡದೇ ಅವಮಾನ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.Body:ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಮೂರು ಜನ ಉಪ ಮುಖ್ಯಮಂತ್ರಿಗಳಿಗೆ ಜಾತಿವಾರು ಪ್ರಾತಿನಿದ್ಯ ನೀಡಿರುವ ಬಿಜೆಪಿ ಸರ್ಕಾರ, ಒಂದೇ ಸಮುದಾಯಕ್ಕೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.
ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಂಪುಟದಲ್ಲಿ ಸೂಕ್ತ ಸ್ಥಾನ ಮಾನ ನೀಡಲು ವಿಫಲವಾಗಿರುವ ಬಿಜೆಪಿ, ಉಪ ಮುಖ್ಯಮಂತ್ರಿಗಳ ನೇಮಕದಲ್ಲೂ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಅವಕಾಶ ನೀಡದೇ ಉದ್ದೇಶಪೂರ್ವಕವಾಗಿ ಈ ಸಮುದಾಯಗಳಿಗೆ ಅವಮಾನ ಮಾಡಲಾಗಿದೆ ಎಂದು ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಧ್ವನಿ ಎತ್ತಲು ಪ್ರಯತ್ನ ಮಾಡಿದ್ದ ಕೆ.ಎಸ್. ಈಶ್ವರಪ್ಪನವರಿಗಾಗಲಿ ಅಥವಾ ಹಿಂದುಳಿದ ವರ್ಗದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗಾಗಲಿ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡಿಲ್ಲ. ಇದರ ಹಿಂದೆ ಹಿಂದುಳಿದ ವರ್ಗಗಳನ್ನು ಅವಮಾನಿಸುವ ಮತ್ತು ಈ ಸಮುದಾಯದ ಸಚಿವರನ್ನು ನಿರ್ಲಕ್ಷ್ಯ ಮಾಡುವ ಉದ್ದೇಶ ಬಿಜೆಪಿಗಿದೆ. ಕನಿಷ್ಠಪಕ್ಷ ತಮಗೆ ಮತ್ತು ತಮ್ಮ ಸಮುದಾಯಕ್ಕೆ ಆಗಿರುವ ಅವಮಾನವನ್ನು ಪ್ರಶ್ನಿಸುವ ಮತ್ತು ಪ್ರತಿಭಟಿಸುವ ನೈತಿಕ ಸ್ಥೈರ್ಯವನ್ನು ಸಚಿವರಾದ ಈಶ್ವರಪ್ಪ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಕಳೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ಜಾತಿ ಮತ್ತು ವರ್ಗಗಳ ಮತವನ್ನು ಬಾಚಿಕೊಂಡಿರುವ ಬಿಜೆಪಿ ಈ ಜಾತಿ ಸಮುದಾಯಗಳನ್ನು ಉದ್ದೇಶಪೂರ್ವಕವಾಗಿ ಅವಮಾನಗೊಳಿಸುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಹಿಂದುಳಿದ ವರ್ಗಗಳ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ವರಿಗೂ ಯಾವುದೇ ಸ್ಥಾನವನ್ನು ಕೇಂದ್ರದಲ್ಲಿ ನೀಡಿಲ್ಲ. ಬಿಜೆಪಿಯ ಹುನ್ನಾರವನ್ನು ಹಿಂದುಳಿದ ಜಾತಿ ಮತ್ತು ವರ್ಗಗಳನ್ನು ಅರ್ಥಮಾಡಿಕೊಳ್ಳಬೇಕು. ಬಿಜೆಪಿ ವ್ಯವಸ್ಥಿತವಾಗಿ ರಾಜ್ಯದಲ್ಲಿ ಹಿಂದುಳಿದ ಜಾತಿ ಮತ್ತು ವರ್ಗಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ತಮ್ಮ ಹೇಳಿಕೆಯಲ್ಲಿ ದೂರಿದ್ದಾರೆ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.