ಮುಂಬೈ: ವಿಶ್ವಾಸ ಮತಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಸೋಲು ಕಂಡಿದ್ದೇ ತಡ ಅತೃಪ್ತ ಶಾಸಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆಲವು ದಿನಗಳಿಂದ ಅಜ್ಞಾತ ವಾಸದಲ್ಲಿರುವ ಅತೃಪ್ತರು, ದೋಸ್ತಿ ಸರ್ಕಾರ ವಿಶ್ವಾಸ ಮತಯಾಚನೆಯಲ್ಲಿ ಸೋಲು ಕಾಣುತ್ತಿದ್ದಂತೆ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಖಾಸಗಿ ಸುದ್ದಿವಾಹಿನಿಗೆ ಕರೆ ಮಾಡಿದ ಶಾಸಕರೊಬ್ಬರು ತಾವು ಪುಣೆಯಲ್ಲಿನ ಹೋಟೆಲ್ನಲ್ಲಿ ಇರುವುದಾಗಿ ಹೇಳಿದ್ದಾರೆ.
18 ದಿನ ಮುಂಬೈನ ರಿನಾಯ್ಸನ್ಸ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದು ಅತೃಪ್ತರು ಪುಣೆಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಂದಲೇ ಕಲಾಪ ವೀಕ್ಷಿಸುತ್ತಿದ್ದರು ಎನ್ನಲಾಗಿದೆ. 12 ಅತೃಪ್ತ ಶಾಸಕರು ಸಭೆ ನಡೆಸಿ ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.