ETV Bharat / state

ಬಿಜೆಪಿ ಸರ್ಕಾರದ ನಾಡಧ್ವಜ ನಿಲುವು ಕನ್ನಡ ವಿರೋಧಿ.. ಮಾಜಿ‌ ಸಿಎಂ‌ ಸಿದ್ದರಾಮಯ್ಯ - ಕನ್ನಡ ವಿರೋಧಿ

ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ ಟಿ ರವಿ ನಾಡಧ್ವಜವನ್ನು ವಿರೋಧಿಸುತ್ತಿದ್ದಾರೆ, ಇದು ತಪ್ಪು. ಮಾಡಬೇಕಾಗಿರುವ ಕೆಲಸ ಬಿಟ್ಟು ಅನಗತ್ಯವಾಗಿ ವಿವಾದ ಸೃಷ್ಟಿಸಬೇಡಿ ಎಂದು ಸರಣಿ ಟ್ವೀಟ್​ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

Siddu Tweet
author img

By

Published : Aug 30, 2019, 1:42 PM IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ ಟಿ ರವಿ ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ ಎಂದು‌ ಮಾಜಿ ಸಿಎಂ‌ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಕಿಡಿಕಾರಿದ್ದಾರೆ.

Siddu Tweet
ಸಿದ್ದು ಟ್ವೀಟ್​​​

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ? ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ. ಬೇರೇನು ಸಮಸ್ಯೆ ಇದೆ? ಎಂದು‌ ಪ್ರಶ್ನಿಸಿದ್ದಾರೆ.

Siddu Tweet
ಸಿದ್ದು ಟ್ವೀಟ್​​​

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಾಜಕ್ಕಾಗಿ ಮನವಿ‌ ಮಾಡಿದ್ದರು. ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ, ವಿನ್ಯಾಸ ಗೊಳಿಸಿದ್ದ ನಾಡ ಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

Siddu Tweet
ಸಿದ್ದು ಟ್ವೀಟ್​​​

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Intro:Body:KN_BNG_02_SIDDARAMAYYA_STATEFLAGTWEET_SCRIPT_7201951

ಬಿಜೆಪಿ ಸರ್ಕಾರದ ನಾಡಧ್ವಜ ನಿಲುವು ಕನ್ನಡ ವಿರೋಧಿಯಾದುದು: ಮಾಜಿ‌ ಸಿಎಂ‌ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ‌‌ ಸಚಿವ ಸಿ.ಟಿ.ರವಿ ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ‌ ಎಂದು‌ ಮಾಜಿ ಸಿಎಂ‌ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ಬಿಜೆಪಿ ಸರ್ಕಾರದ ನಿಲುವು
ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಕಿಡಿಕಾರಿದ್ದಾರೆ.

ನಾವು ನಮಗೊಂದು ನಾಡಗೀತೆಯನ್ನು‌ ಒಪ್ಪಿಕೊಂಡಿಲ್ಲವೇ?
ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ‌ ಕರ್ತವ್ಯ.
ಬೇರೇನು ಸಮಸ್ಯೆ ಇದೆ? ಎಂದು‌ ಪ್ರಶ್ನಿಸಿದ್ದಾರೆ.

ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ‌ಮಾಡಿದ್ದರು.
ಆ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸ ಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ‌ ಎಂದು ಹೇಳಿ‌ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.