ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ನೂರಕ್ಕೆ ನೂರರಷ್ಟು ಸರ್ಕಾರ ರಚನೆ ಮಾಡಲು ಬಿಜೆಪಿ ಸಿದ್ಧವಿದೆ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದ್ದಾರೆ.
ವಿಧಾನಸೌಧದಲ್ಲಿ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಸ್ಪೀಕರ್ ಪಕ್ಷಾತೀತವಾಗಿ ನಡೆದುಕೊಳ್ಳಬೇಕು. ಸಂವಿಧಾನವನ್ನು ಕಾಪಾಡುವ ಕೆಲಸ ಮಾಡಬೇಕು. ಶಾಸಕರು ರಾಜೀನಾಮೆ ಕೊಟ್ಟಾಗ ಅದನ್ನು ಸ್ವೀಕರಿಸಬೇಕು ಎಂದರು.
ಸ್ಪೀಕರ್ ಸ್ಥಾನದ ಗೌರವವನ್ನು ರಮೇಶ್ ಕುಮಾರ್ ಕಾಪಾಡಬೇಕು. ಈ ಸಂಬಂಧ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇವೆ ಎಂದು ಶ್ರೀರಾಮುಲು ಇದೇ ವೇಳೆ ತಿಳಿಸಿದರು.
ಇನ್ನು ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಮುಂಬೈನಲ್ಲಿ ನಾಟಕ ಮಾಡುತ್ತಿದ್ದಾರೆ. ಅವರು ದುಖಾನ್ ಬಂದ್ ಮಾಡಬೇಕು. ಈ ರೀತಿ ಡ್ರಾಮಾ ಮಾಡುವ ಅಗತ್ಯವಿಲ್ಲ. ಸಂಖ್ಯಾಬಲವಿಲ್ಲ ಎಂದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಅಂತ ಶಾಸಕ ಶ್ರೀರಾಮುಲು ಗುಡುಗಿದರು.