ಬೆಂಗಳೂರು : ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಇಂದು ಮೃತದೇಹ ನಗರಕ್ಕೆ ತಲುಪಲಿದೆ. ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಇಂದು ಸಂಜೆ 5ಗಂಟೆಗೆ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪಕ್ಷದ ಇತರ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇರಲಿದ್ದಾರೆ. ಇಂದು ರಾತ್ರಿ ಪಾರ್ಥಿವ ಶರೀರವನ್ನು ಶೈತ್ಯಾಗಾರದಲ್ಲಿ ಇಡಲಾಗುತ್ತದೆ.
ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಅಂತ್ಯಸಂಸ್ಕಾರ ನೆರವೇರಲಿದೆ.
ಸಿದ್ಧತೆ ವೀಕ್ಷಣೆ : ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10 ರಿಂದ 12 ಗಂಟೆವರೆಗೆ ಇರಿಸಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು. ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಕೃಷ್ಣಬೈರೇಗೌಡ ಅವರೂ ಇದ್ದರು.
ರಾಹುಲ್ ಗಾಂಧಿ ಆಗಮನ : ಆಸ್ಕರ್ ಫರ್ನಾಂಡಿಸ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಾಳೆ ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ನಾಳೆ ಮಧ್ಯಹ್ನ 3 ಗಂಟೆಗೆ ಆಗಮಿಸುವ ನಿರೀಕ್ಷೆ ಇದೆ. ಸಂಜೆ ವೇಳೆಗೆ ಹೊಸೂರು ರಸ್ತೆಯ ಚರ್ಚ್ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.