ETV Bharat / state

ಮಾಜಿ ಸಿಎಂ ದಿವಂಗತ ಕೆ.ಸಿ.ರೆಡ್ಡಿ ಕಂಚಿನ ಪ್ರತಿಮೆ ಸ್ಥಾಪನೆಗೆ ಡಿಸಿಎಂ ಕಾರಜೋಳ ಸೂಚನೆ - former CM the late KC Reddy

ಕೆ.ಸಿ. ರೆಡ್ಡಿಯವರ ಕೊಡುಗೆ ಅಪಾರವಾಗಿದೆ. ಅವರ ಪ್ರತಿಮೆಯು ಶಾಶ್ವತವಾಗಿರುವಂತೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಅನುಸರಣಾ ವರದಿಯೊಂದಿಗೆ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಡಿಸಿಎಂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
author img

By

Published : Jun 22, 2020, 4:04 PM IST

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಮಾದರಿ ಕಂಚಿನ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವಂತಹ ಮೂಲ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಮೆಯ ಮಾದರಿಗಳನ್ನು ತರಿಸಿಕೊಂಡು ಸೂಕ್ಷ್ಮವಾಗಿ ಅಧ್ಯಯನ ಮಾಡಿ ನೈಜ ಪ್ರತಿಮೆಯನ್ನು ಸ್ಥಾಪಿಸಬೇಕು. ನುರಿತ ಹಾಗೂ ಪರಿಣಿತರ ಸಹಕಾರದೊಂದಿಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕು. ಕೆ.ಸಿ. ರೆಡ್ಡಿಯವರ ಕೊಡುಗೆ ಅಪಾರವಾಗಿದೆ. ಅವರ ಪ್ರತಿಮೆಯು ಶಾಶ್ವತವಾಗಿರುವಂತೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಅನುಸರಣಾ ವರದಿಯೊಂದಿಗೆ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಡಿಸಿಎಂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಾಮಲಿಂಗರೆಡ್ಡಿ, ದಿ.ಕೆ.ಸಿ.ರೆಡ್ಡಿ ಅವರ ಅವರ ಮೊಮ್ಮಗಳು ವಸಂತ ಕವಿತಾ ರೆಡ್ಡಿ, ವಿಧಾನಸಭೆಯ ಕಾಯದರ್ಶಿ ಎಂ.ಕೆ. ವಿಶಾಲಾಕ್ಷಿ, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ವಿ. ಶ್ರೀನಿವಾಸ್, ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.