ETV Bharat / state

ನೈಟ್ ಕರ್ಫ್ಯೂ ವೇಳೆ ಇರಲ್ಲ ಬಸ್​ ಸಂಚಾರ.. ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ದಂಡ! - ನಮ್ಮ ಮೆಟ್ರೋ

ನಾಳೆಯಿಂದ ಶೇ.100ರಷ್ಟು ಪ್ರಯಾಣಿಕರಿಗೆ ಸರ್ಕಾರ ಅನುಮತಿ ನೀಡಿದೆ. ಸರ್ಕಾರ ಆದೇಶದನ್ವಯ ಶೇಕಡಾ 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುವುದು. ಆದರೆ, ಬಸ್​​ನಲ್ಲಿ ನಿಂತು ಪ್ರಯಾಣ ಮಾಡಲು ಅವಕಾಶವಿಲ್ಲ. ಆಸನದ ಸಾಮರ್ಥ್ಯದಲ್ಲಿ ಪ್ರಯಾಣಿಕರಿಗೆ ಅವಕಾಶ ನೀಡಲಾಗುವುದು. ನಾಳೆಯಿಂದ 3,500 ರಿಂದ 4,000 ಬಸ್​ಗಳು ಸಂಚರಿಸಲಿವೆ..

night curfew
night curfew
author img

By

Published : Jul 4, 2021, 1:30 PM IST

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಇಳಿಕೆ ಬೆನ್ನಲ್ಲೇ ಮತ್ತೊಂದಿಷ್ಟು ಚಟುವಟಿಕೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ನಾಳೆ ಬೆಳಗ್ಗೆ 5 ರಿಂದ ಜುಲೈ 19ರ ಬೆಳಗ್ಗೆ 5 ಗಂಟೆವರೆಗೆ ಜಾರಿಗೆ ಬರುವಂತೆ ಕೆಲ ಸಡಿಲಿಕೆಗಳು ಹಾಗೂ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಗೆ ಶೇ. 100ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಹೀಗಾಗಿ, ರಾಜಧಾನಿ ಬೆಂಗಳೂರಿನಲ್ಲಿ ನಾಳೆಯಿಂದ 5,000 ಬಿಎಂಟಿಸಿ ಬಸ್​​ಗಳು ರಸ್ತೆಗಿಳಿಯಲಿವೆ.

ನಿಯಮ ಪಾಲಿಸದಿದ್ದವರಿಗೆ ದಂಡ

ಈ ಕುರಿತು ಮಾಹಿತಿ ನೀಡಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ, ಬಸ್​ನಲ್ಲಿ ಪ್ರಯಾಣಿಕರು ಸೀಟ್​​ನಲ್ಲಿ ಮಾತ್ರ ಕುಳಿತು ಪ್ರಯಾಣಿಸಲು ಅವಕಾಶ ನೀಡಲಾಗಿದ್ದು, ನಿಂತುಕೊಂಡು ಪ್ರಯಾಣಿಸಲು ಅವಕಾಶ ನೀಡಲ್ಲ. ಈ ಕುರಿತು ಎಲ್ಲಾ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಲಾಗುವುದು. ಕೋವಿಡ್ ನಿಯಮ ಪಾಲನೆ ಮಾಡದ ಪ್ರಯಾಣಿಕರಿಗೆ ಬಸ್ ನಿಲ್ದಾಣಗಳಲ್ಲಿ ಸಿಬ್ಬಂದಿ ದಂಡ ಹಾಕುವ ಅಧಿಕಾರ ನೀಡಲಾಗಿದೆ.

ಹೀಗಾಗಿ, ಜನರು ಕೋವಿಡ್ ನಿಯಮ ಪಾಲಿಸಬೇಕೆಂದು ಮನವಿ ಮಾಡಿದರು. ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಕಾರಣಕ್ಕೆ ರಾತ್ರಿ ಪಾಳಿಯಲ್ಲಿ ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ರಾತ್ರಿ 9 ಗಂಟೆಯವರೆಗೆ ಮಾತ್ರ ಬಸ್​ಗಳ ಸಂಚಾರ ಇರಲಿವೆ.

‘ನಿಂತು ಪ್ರಯಾಣಿಸಲು ಅವಕಾಶವಿಲ್ಲ’

ಕೆಎಸ್​ಆರ್​ಟಿಸಿ ಬಸ್ ಸಂಚಾರ ವಿಭಾಗದ ವ್ಯವಸ್ಥಾಪಕ ಪ್ರಭಾಕರ್​ ರೆಡ್ಡಿ ಮಾಹಿತಿ ನೀಡಿದ್ದು, ನಾಳೆಯಿಂದ ಶೇ.100ರಷ್ಟು ಪ್ರಯಾಣಿಕರಿಗೆ ಸರ್ಕಾರ ಅನುಮತಿ ನೀಡಿದೆ. ಸರ್ಕಾರ ಆದೇಶದನ್ವಯ ಶೇಕಡಾ 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುವುದು. ಆದರೆ, ಬಸ್​​ನಲ್ಲಿ ನಿಂತು ಪ್ರಯಾಣ ಮಾಡಲು ಅವಕಾಶವಿಲ್ಲ. ಆಸನದ ಸಾಮರ್ಥ್ಯದಲ್ಲಿ ಪ್ರಯಾಣಿಕರಿಗೆ ಅವಕಾಶ ನೀಡಲಾಗುವುದು. ನಾಳೆಯಿಂದ 3,500 ರಿಂದ 4,000 ಬಸ್​ಗಳು ಸಂಚರಿಸಲಿವೆ ಎಂದರು.

ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಅನ್‌ಲಾಕ್ 3.Oನಲ್ಲಿ ನಮ್ಮ ಮೆಟ್ರೋಗೆ ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ಬಿಎಂಆರ್​ಸಿಎಲ್​ನಿಂದ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ಬೆಳಗ್ಗೆ 7 ರಿಂದ ರಾತ್ರಿ 8ರವರಿಗೆ ಮೆಟ್ರೋ ಸಂಚಾರ ಇರಲಿದೆ. ಹಸಿರು ಹಾಗೂ ನೇರಳೆ ಎರಡು ಮಾರ್ಗದಲ್ಲಿ ಮೆಟ್ರೋ ರಾತ್ರಿ 8ರವರೆಗೆ ಸೇವೆ ಲಭ್ಯವಿರಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಂದು, ಜನದಟ್ಟಣೆ ಇಲ್ಲದ ವೇಳೆ 15 ನಿಮಿಷಕ್ಕೊಮ್ಮೆ ಮೆಟ್ರೋ ಓಡಿಸಲಾಗುತ್ತದೆ ಅಂತಾ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

ನಿಯಮ ಪಾಲಿಸಿ ಕೊರೊನಾ ತೊಲಗಿಸಿ

ರಾಜ್ಯದಲ್ಲಿ ಕೊರೊನಾ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಹೀಗಾಗಿ, ಜನರು ಎಚ್ಚರಿಕೆಯಿಂದ ಸಾರಿಗೆ ಸೇವೆಗಳನ್ನ ಬಳಸಬೇಕು.‌ ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕಿದೆ.

ಇದನ್ನೂ ಓದಿ:ಅನ್​ಲಾಕ್ 3.0 : ನಾಳೆಯಿಂದ ಮಾದಪ್ಪನ ದರ್ಶನಕ್ಕೆ ಅವಕಾಶ.. ಆದರೆ, ಇದಕ್ಕೂ ಕಂಡೀಷನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.