ಬೆಂಗಳೂರು: ಸಿ. ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಲಾಗಿದೆ. ವಿಧಾನಸಭೆಯಿಂದ ಪರಿಷತ್ಗೆ ಆಯ್ಕೆ ಮಾಡಲು ಆಗಸ್ಟ್ 11ಕ್ಕೆ ಉಪಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದೆ.
ಆಗಸ್ಟ್ 1 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 4ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಸಿ.ಎಂ ಇಬ್ರಾಹಿಂ ಮಾರ್ಚ್ 31ಕ್ಕೆ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪರಿಷತ್ ಸ್ಥಾನದ ಅವಧಿ ಜೂನ್ 17, 2024ರ ವರೆಗೆ ಇರಲಿದೆ.
ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬೆನ್ನಲ್ಲೇ ಪಾಲಿಕೆಯಿಂದ ಮಸೀದಿ ತೆರವಿಗೆ ನೋಟಿಸ್