ಬೆಂಗಳೂರು: ಉದ್ಯಮಿಯೋರ್ವರಿಂದ ಲಂಚಕ್ಕೆ ಕೈಯೊಡ್ಡಿದ್ದ ಆರೋಪದಡಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿ ಸೇರಿದಂತೆ ಇಬ್ಬರನ್ನು ಸಿಬಿಐ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಇತ್ತೀಚೆಗೆ ಉದ್ಯಮಿಯೋರ್ವರನ್ನು ಖಾಸಗಿ ಹೊಟೇಲ್ಗೆ ಕರೆಯಿಸಿ ನಿಮ್ಮ ಮನೆ ಹಾಗೂ ವ್ಯವಹಾರದ ಮೇಲೆ ದಾಳಿ ನಡೆಸದಿರಲು 2 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಆರೋಪಿಗಳು ಬೇಡಿಕೆಯಿಟ್ಟಿರುತ್ತಾರೆ.
ಇದರಿಂದ ಆತಂಕಕ್ಕೆ ಒಳಗಾದ ಉದ್ಯಮಿ 6 ಲಕ್ಷ ರೂಪಾಯಿ ನೀಡಿದ್ದಾರೆ. ಮತ್ತೆ ಉಳಿದ ಹಣವನ್ನು ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಇದರಿಂದ ಬೇಸತ್ತ ಉದ್ಯಮಿ ಸಿಬಿಐಗೆ ದೂರು ನೀಡಿದ್ದರು. 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಸಿಬಿಐ ಗೆ ದೂರು ದಾಖಲಿಸಿದ್ದರು.
ಕೂಡಲೇ ಕಾರ್ಯಪ್ರವೃತ್ತವಾದ ಸಿಬಿಐ, ದೂರುದಾರರಿಂದ ಉಳಿದ ಲಂಚದ ಹಣ ಸ್ವೀಕರಿಸುವಾಗ ಇಡಿ ಅಧಿಕಾರಿ ಹಾಗೂ ಮತ್ತೋರ್ವ ವ್ಯಕ್ತಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದ್ದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.
ಇದನ್ನೂ ಓದಿ: ಪರಿಸರವಾದಿ ದಿಶಾ ರವಿ ಬಿಡುಗಡೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ