ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ಐತಿಹಾಸಿಕವಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಹೇಳಿದಂತೆ ರಾಜ್ಯ ಮತ್ತು ದೇಶ ಅಭಿವೃದ್ಧಿಯಾಗಬೇಕು. ಆ ನಿಟ್ಟಿನಲ್ಲಿ SC, ST ಸಮುದಾಯದ ಮಕ್ಕಳಿಗೆ ಕೇಂದ್ರ ಬಜೆಟ್ನಲ್ಲಿ 35 ಸಾವಿರ ಕೋಟಿ ನೀಡಿದ್ದಾರೆ. ಹಣ ಮೀಸಲಿಟ್ಟಿರುವ ನಿರ್ಮಲಾ ಸೀತರಾಮನ್ ಅವರಿಗೆ ಅಭಿನಂದನೆ ತಿಳಿಸಿದರು.
99 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ನೀಡಿದ್ದಾರೆ. ಮೆಟ್ರೋ, ರೈಲಿಗೆ ಹಣ ನೀಡಿದ್ದಾರೆ. ಮಹಾತ್ಮ ಗಾಂಧಿ, ಬಸವಣ್ಣನವರ ಆಶಯದಂತೆ ಶೋಷಿತ ವರ್ಗಕ್ಕೆ ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಮೀಸಲಾತಿ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶೇ. 7.5 ರಷ್ಟು ಮೀಸಲಾತಿ ವಿಚಾರ ಸಂಬಂಧಿಸಿದಂತೆ, ಕ್ಯಾಬಿನೆಟ್ ಸಬ್ ಕಮಿಟಿ ಮಾಡಲಾಗಿದೆ. ಅದನ್ನು ಕ್ಯಾಬಿನೆಟ್‌ನಲ್ಲಿ ಮತ್ತೆ ಚರ್ಚೆಗೆ ತರುತ್ತೇನೆ. ಯಡಿಯೂರಪ್ಪ ಸರ್ಕಾರದಿಂದ 7.5% ರಷ್ಟು ಮೀಸಲಾತಿ ಜಾರಿಗೊಳಿಸುತ್ತೇವೆ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದು ಎಂದರು.